
ಕಲಬುರಗಿ,ನ.6: ಗೂಡ್ಸ್ ವಾಹನಗಳಲ್ಲಿ ಅಕ್ರಮವಾಗಿದ್ದ ಸಾಗಿಸುತ್ತಿದ್ದ ಗೋವು ಮತ್ತು ಕರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ನಗರದ ರಿಂಗ್ ರಸ್ತೆ ಅಫಜಲಪುರ ಕ್ರಾಸ್ ಹತ್ತಿರ ಎರಡು ಗೂಡ್ಸ್ ವಾಹನಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 10 ಹಸುಕರುಗಳನ್ನು ನಗರದ ಅಶೋಕ ನಗರ ಠಾಣೆ ಪೊಲೀಸರು ರಕ್ಷಿಸಿದ್ದಾರೆ.ಘಟನೆಯಲ್ಲಿ ವಾಹನಗಳ ಚಾಲಕರು ವಾಹನಗಳನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ.
ವಾಹನದ ಮಾಲೀಕರು ಮತ್ತು ಚಾಲಕರ ವಿರುದ್ಧ ಪ್ರಕರಣ ದಾಖಲಾಗಿದ್ದು, ಜಾನುವಾರುಗಳನ್ನು ಸ್ಥಳೀಯ ಗೋಶಾಲೆಗೆ ಸೇರಿಸಲಾಗಿದೆ.
























