ಬಿಜೆಪಿಯಿಂದ ಪ್ರತಿಭಟನೆ

ಧಾರವಾಡ, ಆ26: ಧರ್ಮಸ್ಥಳದ ಮೇಲೆ ಮತ್ತು ಧರ್ಮಾಧಿಕಾರಿ ವೀರೇಂದ್ರ ಹೆಗಡೆಯವರ ಮೇಲೆ ಷಂಡ್ಯಂತ್ರ ನಡೆಯುತ್ತಿದೆ ಎಂದು ಖಂಡಿಸಿ ಕಾಂಗ್ರೆಸ್ ಸರ್ಕಾರದ ದುರಾಡಳಿತ ನೀತಿಗಳ ವಿರುದ್ಧ ಭಾರತೀಯ ಜನತಾ ಪಾರ್ಟಿ ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲೆಯ ವತಿಯಿಂದ “ಧರ್ಮದ ಉಳಿವಿಗಾಗಿ ಧರ್ಮ ಯುದ್ದ” ಪ್ರತಿಭಟನೆಯಲ್ಲಿ ಕಲಾಭವನದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಬೃಹತ್ ಪಾದಯಾತ್ರೆ ನಡೆಯಿತು.


ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ತಿಪ್ಪಣ್ಣ ಮಜ್ಜಗಿ, ಮಾಜಿಮಹಾಪೌರರಾದ ಈರೇಶ ಅಂಚಟಗೇರಿ, ನಿಂಗಪ್ಪ ಸುತಗಟ್ಟಿ, ಮಾಜಿ ಶಾಸಕರಾದ ಸೀಮಾ ಮಸೂತಿ, ರಾಜಣ್ಣ ಕೊರವಿ, ಶಿವು ಹಿರೇಮಠ, ಶಂಕರ ಶೆಳಕೆ, ಶಂಕರ ಕೊಮಾರದೇಸಾಯಿ, ವಿಜಯಾನಂದ ಶೆಟ್ಟಿ, ಮೊಹನ ರಾಮದುರ್ಗ, ಶ್ರೀನಿವಾಸ ಕೋಟ್ಯಾನ, ಮಹಾನಗರ ಪಾಲಿಕೆಯ ಸದಸ್ಯರು ಪಾಲ್ಗೊಂಡಿದ್ದರು.