
ಹುಮನಾಬಾದ್:ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮೇಲಿನ ಇ.ಡಿ. (ಇಆ) ದಾಳಿಯನ್ನು ರಾಜಕೀಯ ಪ್ರೇರಿತ ಎಂದು ಖಂಡಿಸಿ ದಲಿತ ಸೇನೆ ತಾಲೂಕಾ ಘಟಕ ಹುಮನಾಬಾದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಪಟ್ಟಣದ ಡಾ. ಅಂಬೇಡ್ಕರ್ ವೃತ್ತದಲ್ಲಿ ಸೆ.14ರಂದು ನಡೆದ ಪ್ರತಿಭಟನೆಯಲ್ಲಿ ದಲಿತ ಸೇನೆಯ ಕಾರ್ಯಕರ್ತರು ಬ್ಯಾನರ್ ಹಿಡಿದು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಸಚಿವ ಸತೀಶ್ ಜಾರಕಿಹೊಳಿ ಅವರ ಮೇಲೆ ನಡೆಯುತ್ತಿರುವ ಇ.ಡಿ. ತನಿಖೆಯು ದ್ವೇಷದ ರಾಜಕಾರಣವಾಗಿದ್ದು, ಕೂಡಲೇ ಇಂತಹ ರಾಜಕೀಯ ಪ್ರೇರಿತ ದಾಳಿಯನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.
ದಲಿತ ಸಮುದಾಯದ ನಾಯಕರನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಲಾಗುತ್ತಿದೆ. ಇದು ಸಂವಿಧಾನ ವಿರೋಧಿ ನಡೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಪ್ರತಿಭಟನೆಯಲ್ಲಿ ದಲಿತ ಸೇನೆಯ ತಾಲೂಕಾ ಅಧ್ಯಕ್ಷ ವೀರಪ್ಪಾ ಧುಮ್ಮನಸೂರ,ಅಶೋಕ್ ಗೌರೆ, ಮಲ್ಲಿಕಾರ್ಜುನ ಮಹೇಂದ್ರಕುಮಾರು, ಪ್ರಫುಲ್ ಗಾಯಕ್ವಾಡ್, ಅಶೋಕ ಸಿಂದೆ, ಮಾಣಿಕ ಪವರ್ , ಸಂಜು ಕಿಣ್ಣಿ ಜೈಭೀಮ್ ಕನ್ನಕಟ್ಟಾ ಮತ್ತು ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.



























