ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

ನವಲಗುಂದ,ಏ31 : ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪಟ್ಟಣದ ಹೊರವಲಯದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಪ್ರಾಂಶುಪಾಲರು ಹಾಗೂ ಶಿಕ್ಷಕರು ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಅಸಮಾಧಾನ ಹೊರ ಹಾಕಿದರು.

ಜ್ಯೋತಿ ಸಂಜೀವಿನಿ ಅನುಷ್ಠಾನಗೊಳಿಸಬೇಕು. ಮರಣ ಮತ್ತು ನಿವೃತ್ತಿ ಉಪದಾನ ಸೌಲಭ್ಯ ಒದಗಿಸಬೇಕು. ಮನೆ ಬಾಡಿಗೆ ಕಡಿತದಿಂದ ವಿನಾಯಿತಿ ನೀಡಬೇಕು. ಶೇ10ರಷ್ಟು ವಿಶೇಷ ಭತ್ಯೆ ಮಂಜೂರಾತಿ ಮಾಡಬೇಕು ಎಂದು ಪ್ರತಿಭಟನಾನಿರತರು ಆಗ್ರಹಿಸಿದರು.

ನ್ಯಾಯಯುತ ಬೇಡಿಕೆ ಈಡೇರಿಕೆ ಸಂಬಂಧ ಈಗಾಗಲೇ ಸರ್ಕಾರಕ್ಕೆ ಹಲವು ಬಾರಿ ಮನವಿ ಮಾಡಿದ್ದರೂ ಪರಿಹಾರ ಸಿಕ್ಕಿಲ್ಲ. ಕೂಡಲೇ ನಮ್ಮ ಬೇಡಿಕೆಗಳನ್ನು ಈಡೇಸಿದಿದ್ದರೆ ತರಗತಿಗಳನ್ನು ಬಹಿಷ್ಕರಿಸುವ ಜೊತೆಗೆ ವಿವಿಧ ಮಾದರಿಯಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ವಸತಿ ಶಾಲೆ ಪ್ರಾಂಶುಪಾಲರಾದ ರಮೇಶ ಕಬ್ಬೇರಳ್ಳಿ ,ಸಿಬ್ಬಂದಿಗಳಾದ ಮಹಾದೇವ ಜಾಧವ, ನಾಗರಾಜ ಗಂಗಾವತಿ, ಜಂಬುನಾಥ ಬೆಂತೂರ, ಮಂಜುನಾಥ ಮುಧೋಳ, ಶ್ರೀದೇವಿ ಪೂಜಾರ, ಅಪರ್ಣಾ ಭಟ್, ನಂದಾ ಶಿಂಧೆ ,ನಾಜರೀನ ಜಾಗಿರದಾರ ಇತರರು ಪ್ರತಿಭಟನೆಯಲ್ಲಿದ್ದರು.