Home ಜಿಲ್ಲೆ ಕಲಬುರಗಿ ಜಿ-ಟ್ಯಾಗ್ ತಳಿ ತೊಗರಿಗೆ ಹೆಚ್ಚಿನ ಬೆಂಬಲ ಬೆಲೆ ನೀಡಿ

ಜಿ-ಟ್ಯಾಗ್ ತಳಿ ತೊಗರಿಗೆ ಹೆಚ್ಚಿನ ಬೆಂಬಲ ಬೆಲೆ ನೀಡಿ

ಕಲಬುರಗಿ,ಅ.10-ಕಲಬುರಗಿ ಜಿಲ್ಲೆ ರಾಜ್ಯದ ತೊಗರಿ ಕಣಜ ಎಂದು ಹೆಸರುವಾಸಿಯಾಗಿದೆ. ಕೇಂದ್ರ ಸರ್ಕಾರ ಕಲಬುರಗಿ ತೊಗರಿಗೆ ಜಿ-ಟ್ಯಾಗ್ ನೀಡಿದ್ದು, ಹೊರ ರಾಜ್ಯ ಮತ್ತು ಹೊರ ದೇಶಗಳಲ್ಲಿ ಹೆಚ್ಚಿನ ಬೇಡಿಕೆ ಇದೆ. ಜಿ-ಟ್ಯಾಗ್ ತಳಿ ತೊಗರಿಗೆ ಬೇರೆ ತೊಗರಿ ತಳಿಗಳಿಗಿಂತ ಹೆಚ್ಚಿನ ಬೆಂಬಲ ಬೆಲೆ ನೀಡಬೇಕು ಎಂದು ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಡಾ.ಸಿದ್ರಾಮಪ್ಪ ಪಾಟೀಲ ಧಂಗಾಪುರ ಒತ್ತಾಯಿಸಿದ್ದಾರೆ.
ಈ ಸಂಬಂಧ ಕೃಷಿ ಸಚಿವ ಹಾಗೂ ಕೃಷಿಕ ಸಮಾಜದ ಅಧ್ಯಕ್ಷ ಪಿ.ಎಂ.ನರೇಂದ್ರ ಸ್ವಾಮಿ ಅವರಿಗೆ ಮನವಿ ಪತ್ರ ಸಲ್ಲಿಸಿರುವ ಅವರು, ಸರ್ಕಾರ ಮೌಲ್ಯವರ್ಧಿತ ಕೃಷಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು, ಆರೋಗ್ಯ ಆವಿಷ್ಕಾರ, ಶಿಕ್ಷಣ ಆವಿಷ್ಕಾರದಂತೆ ಕೃಷಿ ಆವಿಷ್ಕಾರ ಮಾಡಲು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ಸೂಚಿಸಬೇಕು ಎಂದು ಒತ್ತಾಯಿಸಿದ್ದಾರೆ.
ತೊಗರಿ ಮಂಡಳಿಗೆ ಹೆಚ್ಚಿನ ಅನುದಾನ ನೀಡುವುದರ ಜೊತೆಗೆ ಅಗತ್ಯವಾದ ಸಿಬ್ಬಂದಿ ನೇಮಕ ಮಾಡಬೇಕು, ಕಲಬುರಗಿ ಜಿಲ್ಲೆಯನ್ನು ಸರ್ಕಾರ ಬರಪೀಡಿತ ಎಂದು ಘೋಷಿಸಿದ್ದು, ಬೆಳೆ ಹಾನಿಯಾದ ರೈತರಿಗೆ ಮಧ್ಯಂತರ ಪರಿಹಾರ ನೀಡಬೇಕು ಎಂದು ಮನವಿ ಮಾಡಿದ್ದಾರೆ.