ಎಲ್ಲ ರೈತರಿಗೆ ಪರಿಹಾರ ನೀಡಿ : ಡಾ.ವಂಟಿ

ಕಲಬುರಗಿ: ರಾಜ್ಯ ಅದರಲ್ಲಿ ವಿಶೇಷವಾಗಿ ನಮ್ಮ ಜಿಲ್ಲೆ, ಕಕ ಭಾಗದಲ್ಲಿ ಕಳೆದ ಕೆಲವು ದಿವಸಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಲಕ್ಷಾಂತರ ಎಕರೆ ಪ್ರದೇಶದಲ್ಲಿ ಬೆಳೆಗಳು ಸಂಪೂರ್ಣ ಹಾನಿಗೊಳಗಾಗಿವೆ. ಬೆಳೆ ವಿಮೆ ಮಾಡಿಸಿದವರಿಗೆ ಪರಿಹಾರ ನೀಡುವುದರ ಜೊತೆಗೆ ಎಲ್ಲಾ ರೈತರಿಗೆ ಪರಿಹಾರ ನೀಡಬೇಕು ಎಂದು ಸಮಾಜ ಸೇವಕ ಡಾ.ಸುನೀಲಕುಮಾರ ಎಚ್.ವಂಟಿ ಸರ್ಕಾರಕ್ಕೆ ವಿನಂತಿ ಮಾಡಿದ್ದಾರೆ.
ಪತ್ರಿಕಾ ಪ್ರಕಟಣೆಯ ಮೂಲಕ ಶುಕ್ರವಾರ ಮುಖ್ಯಮಂತ್ರಿಗಳಿಗೆ ವಿನಂತಿ ಮಾಡಿದ ಅವರು, ವಾಸ್ತವವಾಗಿ ಬಹುತೇಕ ರೈತರು ಅತಿವೃಷ್ಟಿಯಿಂದ ಸಂಕಷ್ಟದಲ್ಲಿದ್ದಾರೆ. ಬೆಳೆ ವಿಮೆ ಮಾಡಿಸಿದ್ದಾರೆ ಅಥವಾ ಇಲ್ಲ ಎನ್ನುವುದನ್ನು ನೋಡದೆ, ಬೆಳೆ ನಷ್ಟವನ್ನು ಗಮನಿಸಿ, ಪರಿಹಾರ ನಿಡಬೇಕು. ತೊಂದರೆಯಲ್ಲಿರುವ ರೈತರ ನೆರವಿಗೆ ಧಾವಿಸುವುದು ತುರ್ತು ಅಗತ್ಯವಾಗಿದೆ ಎಂದು ತಿಳಿಸಿದ್ದಾರೆ.