Home ಜಿಲ್ಲೆ ಬ್ರಿಮ್ಸ್ನಲ್ಲಿ ಬಡ ರೋಗಿಗಳಿಗೆ ಸೂಕ್ತ ಚಿಕಿತ್ಸೆ, ಗುಣಮಟ್ಟದ ಔಷಧಿ ನೀಡಿ: ಕರವೇಒಂದು ವಾರದೊಳಗೆ ಕ್ರಮ ಕೈಗೊಳ್ಳದಿದ್ದರೆ...

ಬ್ರಿಮ್ಸ್ನಲ್ಲಿ ಬಡ ರೋಗಿಗಳಿಗೆ ಸೂಕ್ತ ಚಿಕಿತ್ಸೆ, ಗುಣಮಟ್ಟದ ಔಷಧಿ ನೀಡಿ: ಕರವೇಒಂದು ವಾರದೊಳಗೆ ಕ್ರಮ ಕೈಗೊಳ್ಳದಿದ್ದರೆ ಬೃಹತ್ ಪ್ರತಿಭಟನೆ ಎಚ್ಚರಿಕೆ

ಬೀದರ್: ಬೀದರ್‍ನ ಬ್ರಿಮ್ಸ್ ಬೋಧಕ ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಸಮಯಕ್ಕೆ ಸರಿಯಾಗಿ ಸೂಕ್ತ ಚಿಕಿತ್ಸೆ ನೀಡುತ್ತಿಲ್ಲ ಹಾಗೂ ಗುಣಮಟ್ಟದ ಔಷಧಿಗಳನ್ನು ನೀಡಲಾಗುತ್ತಿಲ್ಲ ಎಂಬ ದೂರುಗಳ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ ಶೆಟ್ಟಿ ಬಣ) ಜಿಲ್ಲಾ ಸಮಿತಿಯ ಜಿಲ್ಲಾ ಅಧ್ಯಕ್ಷ ಪೀಟರ್ ಚಿಟಗುಪ್ಪಾ ಅವರ ನೇತ್ರತ್ವದಲ್ಲಿ ಇಂದು ಬ್ರೀಮ್ಸ್ ಮುಖ್ಯ ಆಡಳಿತಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದಾರೆ

ಬೀದರ್ ಜಿಲ್ಲೆ ಮಾತ್ರವಲ್ಲದೆ ಸುತ್ತಮುತ್ತಲಿನ ಗ್ರಾಮಗಳು ಹಾಗೂ ವಿವಿಧ ತಾಲೂಕುಗಳಿಂದ ಪ್ರತಿನಿತ್ಯ ಸಾವಿರಾರು ಬಡ ರೋಗಿಗಳು ಚಿಕಿತ್ಸೆಗಾಗಿ ಬ್ರಿಮ್ಸ್ ಆಸ್ಪತ್ರೆಗೆ ಆಗಮಿಸುತ್ತಾರೆ. ಆದರೆ ರೋಗಿಗಳಿಗೆ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ದೊರೆಯುತ್ತಿಲ್ಲ ಎಂಬ ಆರೋಪಗಳು ಕೇಳಿಬರುತ್ತಿವೆ ಎಂದು ತಿಳಿಸಿದ್ದಾರೆ.

ಸರ್ಕಾರದಿಂದ ಕೋಟ್ಯಂತರ ರೂಪಾಯಿ ಅನುದಾನ ಬರುತ್ತಿದ್ದರೂ ಆಸ್ಪತ್ರೆಯಲ್ಲಿ ಕಳಪೆ ಗುಣಮಟ್ಟದ ಔಷಧಿಗಳನ್ನು ಖರೀದಿಸಲಾಗುತ್ತಿದೆ ಎಂಬ ಆರೋಪಗಳಿದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕು. ಆಸ್ಪತ್ರೆಯ ಸ್ವಚ್ಛತೆ ನಿರ್ವಹಣೆಯಲ್ಲಿಯೂ ನಿರ್ಲಕ್ಷ್ಯ ಕಂಡುಬರುತ್ತಿದೆ ಎಂದು ದೂರಿದ್ದಾರೆ.

ಅಲ್ಲದೆ, ಸರ್ಕಾರದ ಅನುಮತಿ ಪಡೆಯದೆ ಗುತ್ತಿಗೆ ಹಾಗೂ ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ ಎಂಬ ಆರೋಪದ ಬಗ್ಗೆಯೂ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ. ಬ್ರಿಮ್ಸ್ ಆಡಳಿತದ ಕಾರ್ಯವೈಖರಿಯ ಕುರಿತು ಉನ್ನತ ಮಟ್ಟದ ಅಧಿಕಾರಿಗಳಿಂದ ಪರಿಶೀಲನೆ ನಡೆಸಿ, ಆರೋಪಗಳು ಸಾಬೀತಾದಲ್ಲಿ ಸಂಬಂಧಿಸಿದ ನಿರ್ದೇಶಕರು, ವೈದ್ಯರು ಹಾಗೂ ಸಿಬ್ಬಂದಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಬ್ರಿಮ್ಸ್ನಲ್ಲಿ ಬಳಸಲಾಗುತ್ತಿರುವ ಔಷಧಿಗಳ ಗುಣಮಟ್ಟ ಪರಿಶೀಲನೆ, ಗುತ್ತಿಗೆ ಹಾಗೂ ಹೊರಗುತ್ತಿಗೆ ನೇಮಕಾತಿಗಳ ಕುರಿತು ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಒಂದು ವಾರದ ಬಳಿಕ ಬ್ರಿಮ್ಸ್ ಆಸ್ಪತ್ರೆ ಎದುರು ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಸಂಧರ್ಭದಲ್ಲಿ ಕರವೇ ಜಿಲ್ಲಾ ಕಾರ್ಯಾಧ್ಯಕ್ಷ ಜಗನ್ನಾಥ ಕೌಠಾ, ಜಿಲ್ಲಾ ಸಂಚಾಲಕ ಬಸವರಾಜ, ಜಿಲ್ಲಾ ಯುವ ಘಟಕ ಅಧ್ಯಕ್ಷ ಚಂದ್ರಕಾಂತ ಪೆÇೀಳ, ಬೀದರ್ ದಕ್ಷಿಣ ತಾಲೂಕು ಅಧ್ಯಕ್ಷ ನಿಲೇಶ ಠಾಠೋಡ್, ಜಿಲ್ಲಾ ಸಹ ಕಾರ್ಯದರ್ಶಿಗಳಾದ ಮೊಜೆಸ್ ಅಣದೂರಕರ್, ಮೈಕಲ್ ಕಡ್ಯಾಳ ಹಾಗೂ ಅಶೋಕ್ ಕಡ್ಯಾಳ, ಜಿಲ್ಲಾ ಮುಖಂಡರಾದ ದಿನೇಶ್ ಕಮಟಾಣ, ರಾಜು ಮೇಲದೊಡ್ಡಿ, ಜಾನ್ ಕಮಟಾಣ, ಪಿಂಟು ಸಿರ್ಸಿ,ನಗರ ಉಪಾಧ್ಯಕ್ಷ ಪ್ರಸಾದ್ ಘೋಡಂಪಳಿಕರ್, ನಗರ ಪ್ರಧಾನ ಕಾರ್ಯದರ್ಶಿ ಗಿರೀಶ್ ಓಂಕಾರ್, ಬೀದರ್ ಉತ್ತರ ಅಧ್ಯಕ್ಷ ಅಬ್ದುಲ್ ರಹೀಮ್, ಬೀದರ್ ದಕ್ಷಿಣ ತಾಲೂಕು ಉಪಾಧ್ಯಕ್ಷ ಧನರಾಜ ಚಿಟ್ಟಾವಾಡಿ, ಸಹ ಕಾರ್ಯದರ್ಶಿ ರಾಜಗೊಂಡ ಅಣದೂರಕರ್ ಸೇರಿದಂತೆ ಅಜಯ್ ಮೈಲೂರ್, ಟಿಫನ್ ಮೇತ್ರೆ, ಸುಧಾಕರ್ ಚಿಧಕ್, ವೀರೇಶ್, ಶಿವಾನಂದ್, ಪಾಸಿಲ್ ಅಹಮದ್, ಅಭಿಷೇಕ್ ಹಾಗೂ ಅನೇಕ ಕರವೇ ಕಾರ್ಯಕರ್ತರು ಉಪಸ್ಥಿತರಿದ್ದರು.