
ಯಾದಗಿರಿ,ಫೆ.21-ಜಿಲ್ಲೆಯ ಹುಣಸಗಿ ಪಟ್ಟಣದಲ್ಲಿ ಸಾಮಾಜಿಕ ಜಾಲತಾಣ ಇನ್‍ಸ್ಟಾಗ್ರಾಂನಲ್ಲಿ ಪ್ರಚೋದನಕಾರಿ ಹಾಗೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಬಹುದಾದ ವಿಷಯವನ್ನು ಪೆÇೀಸ್ಟ್ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಹುಣಸಗಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.
ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೆÇೀಸ್ಟ್ ಹಂಚಿಕೆಯಾಗಿದ್ದು, ಸಾರ್ವಜನಿಕ ವಲಯದಲ್ಲಿ ಆತಂಕ ಹಾಗೂ ಚರ್ಚೆಗೆ ಕಾರಣವಾಗಿದೆ. ಈ ರೀತಿಯ ಹೇಳಿಕೆಗಳು ಸಮಾಜದಲ್ಲಿ ವೈಮನಸ್ಸು ಉಂಟುಮಾಡುವ ಸಾಧ್ಯತೆ ಇರುವುದರಿಂದ ಪೆÇಲೀಸರು ಇದನ್ನು ಗಂಭೀರವಾಗಿ ಪರಿಗಣಿಸಿದ್ದಾರೆ.
ಅಪರಿಚಿತ ವ್ಯಕ್ತಿಯೊಬ್ಬರು “ಹುಣಸಗಿ ಭಜರಂಗದಳ” ಎಂಬ ಹೆಸರಿನಲ್ಲಿ ನಕಲಿ ಇನ್‍ಸ್ಟಾಗ್ರಾಂ ಐಡಿ ಸೃಷ್ಟಿಸಿ ಈ ಪೆÇೀಸ್ಟ್ ಪ್ರಕಟಿಸಿರುವುದು ಪ್ರಾಥಮಿಕ ಪರಿಶೀಲನೆಯಲ್ಲಿ ತಿಳಿದುಬಂದಿದೆ. ಸಂಘಟನೆಯ ಹೆಸರನ್ನು ದುರುಪಯೋಗಪಡಿಸಿಕೊಂಡು ಸಮಾಜದಲ್ಲಿ ಗೊಂದಲ ಸೃಷ್ಟಿಸುವ ಯತ್ನ ನಡೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಸಂಬಂಧಪಟ್ಟ ಸಂಘಟನೆಯ ಪದಾಧಿಕಾರಿಗಳು ಈ ಐಡಿಗೆ ತಮ್ಮ ಯಾವುದೇ ಸಂಬಂಧ ಇಲ್ಲವೆಂದು ಸ್ಪಷ್ಟಪಡಿಸಿದ್ದು, ಸಂಘಟನೆಯ ಹೆಸರಿಗೆ ದಕ್ಕೆ ತರುವ ಉದ್ದೇಶದಿಂದ ಕಿಡಿಗೇಡಿಗಳು ಈ ಕ್ರಮ ಕೈಗೊಂಡಿರುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.
ಘಟನೆಯ ಗಂಭೀರತೆಯನ್ನು ಮನಗಂಡು ಹುಣಸಗಿ ಪೆÇಲೀಸರು ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ತನಿಖಾಧಿಕಾರಿಯಾಗಿ ಭಾಗಣ್ಣ ಪಿ.ಎಸ್.ಐ. ಅವರನ್ನು ನೇಮಿಸಲಾಗಿದ್ದು, ಸಾಮಾಜಿಕ ಜಾಲತಾಣದ ತಾಂತ್ರಿಕ ಮಾಹಿತಿಗಳ ಆಧಾರದ ಮೇಲೆ ಆರೋಪಿಗಳ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ.
ಸಾಮಾಜಿಕ ಜಾಲತಾಣಗಳನ್ನು ದುರುಪಯೋಗಪಡಿಸಿ ಸಮಾಜದಲ್ಲಿ ಅಶಾಂತಿ ಉಂಟುಮಾಡಲು ಯತ್ನಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೆÇಲೀಸ್ ಇಲಾಖೆ ತಿಳಿಸಿದೆ. ಪ್ರಕರಣದ ತನಿಖೆ ಮುಂದುವರಿದಿದ್ದು, ಆರೋಪಿಗಳ ಗುರುತು ಪತ್ತೆಯಾದ ನಂತರ ಹೆಚ್ಚಿನ ವಿವರಗಳು ಬಹಿರಂಗವಾಗುವ ನಿರೀಕ್ಷೆ ಇದೆ.
























