
ಕಲಬುರಗಿ,ಜೂ.18-ನೇಣು ಹಾಕಿಕೊಂಡು ಪಿಎಸ್‍ಐ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ನಗರದಲ್ಲಿ ನಡೆದಿದೆ.
ಕಲಬುರಗಿ ಕಮಿಷನರೇಟ್ ವ್ಯಾಪ್ತಿಯ ಡಿಸಿಆರ್‍ಬಿ ವಿಭಾಗದಲ್ಲಿ ಪಿಎಸ್‍ಐ ಆಗಿದ್ದ ಬಸವರಾಜ ಹೆರೂರ್ ಆತ್ಮಹತ್ಯೆ ಮಾಡಿಕೊಂಡವರು.
ನಗರದ ಗಂಗಾ ನಗರದ ನಿವಾಸದಲ್ಲಿ ಘಟನೆ ನಡೆದಿದ್ದು, ಕೌಟುಂಬಿಕ ಸಮಸ್ಯೆಗಳೇ ಆತ್ಮಹತ್ಯೆಗೆ ಕಾರಣ ಎಂದು ಮೂಲಗಳು ತಿಳಿಸಿವೆ.
ಆರ್.ಜಿ.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.


























