Home ಜಿಲ್ಲೆ ಕಲಬುರಗಿ ರಸ್ತೆ ಅತಿಕ್ರಮಿಸಿದ ಅಂಗಡಿಗಳಿಗೆ ಪಿಎಸ್‍ಐ ವಿಜಯಕುಮಾರ ನಾಯ್ಕ್ ಖಡಕ್ ಎಚ್ಚರಿಕೆ!

ರಸ್ತೆ ಅತಿಕ್ರಮಿಸಿದ ಅಂಗಡಿಗಳಿಗೆ ಪಿಎಸ್‍ಐ ವಿಜಯಕುಮಾರ ನಾಯ್ಕ್ ಖಡಕ್ ಎಚ್ಚರಿಕೆ!

ಅಫಜಲಪುರ: ತಾಲ್ಲೂಕಿನ ಪ್ರಮುಖ ವಾಣಿಜ್ಯ ಕೇಂದ್ರವಾಗಿರುವ ಅಫಜಲಪುರ ಪಟ್ಟಣದಲ್ಲಿ ರಸ್ತೆ ಬದಿಯ ಅಂಗಡಿಗಳ ಅತಿಕ್ರಮಣದಿಂದ ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗುತ್ತಿರುವ ಹಿನ್ನೆಲೆಯಲ್ಲಿ ಪೆÇಲೀಸ್ ಅಧಿಕಾರಿಗಳು ಮಾರುಕಟ್ಟೆ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪಟ್ಟಣದ ಪ್ರಮುಖ ಸ್ಥಳಗಳಾದ ಬಸವೇಶ್ವರ ವೃತ್ತ, ಡಾ. ಬಿ ಆರ್ ಅಂಬೇಡ್ಕರ್ ವೃತ್ತ, ಬಸ್ ನಿಲ್ದಾಣ, ಸೇರಿದಂತೆ ಹಲವು ಕಡೆಗಳಲ್ಲಿ ಕೆಲವು ಅಂಗಡಿ ಮಾಲೀಕರು ತಮ್ಮ ಅಂಗಡಿ ಮುಂಗಟ್ಟುಗಳನ್ನು ರಸ್ತೆಯವರೆಗೆ ವಿಸ್ತರಿಸಿ ವ್ಯಾಪಾರ ನಡೆಸುತ್ತಿರುವುದರಿಂದ ವಾಹನ ಸವಾರರು ಹಾಗೂ ಪಾದಚಾರಿಗಳು ತೀವ್ರ ತೊಂದರೆ ಅನುಭವಿಸುವಂತಾಗಿದೆ. ಇದರಿಂದ ಮಾರುಕಟ್ಟೆ ಪ್ರದೇಶದಲ್ಲಿ ಸಂಚಾರ ದಟ್ಟಣೆ ಹೆಚ್ಚಾಗುತ್ತಿದ್ದು, ಸಾರ್ವಜನಿಕರ ಸುಗಮ ಸಂಚಾರಕ್ಕೆ ಅಡ್ಡಿಯಾಗುತ್ತಿದೆ ಎಂಬ ದೂರುಗಳು ಕೇಳಿಬಂದಿದ್ದವು.

ಈ ಹಿನ್ನೆಲೆಯಲ್ಲಿ ಸ್ಥಳ ಪರಿಶೀಲನೆ ನಡೆಸಿದ ಪೆÇಲೀಸ್ ಅಧಿಕಾರಿಗಳು, ಅಂಗಡಿ ಮಾಲೀಕರಿಗೆ ರಸ್ತೆ ಅತಿಕ್ರಮಿಸದಂತೆ ಎಚ್ಚರಿಕೆ ನೀಡಿದ್ದಾರೆ. ಸಾರ್ವಜನಿಕ ರಸ್ತೆಗಳು ಎಲ್ಲರಿಗೂ ಸೇರಿದ್ದು, ಅವುಗಳನ್ನು ವ್ಯಾಪಾರಕ್ಕಾಗಿ ಅತಿಕ್ರಮಿಸುವುದು ಸರಿಯಲ್ಲ. ಅಂಗಡಿಗಳ ಮುಂದೆ ಸರಕುಗಳನ್ನು ಜೋಡಿಸುವುದು ಹಾಗೂ ರಸ್ತೆಯವರೆಗೆ ವ್ಯಾಪಾರ ವಿಸ್ತರಿಸುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಿದ್ದಾರೆ.

ಅಫಜಲಪುರದ ಮಾರುಕಟ್ಟೆ ಪ್ರದೇಶಗಳಲ್ಲಿ ಸಂಚಾರ ವ್ಯವಸ್ಥೆ ಸುಗಮವಾಗಿರಲು ಅಂಗಡಿ ಮಾಲೀಕರು ಜವಾಬ್ದಾರಿಯಿಂದ ವರ್ತಿಸಬೇಕು. ಪಾದಚಾರಿಗಳು ಸುರಕ್ಷಿತವಾಗಿ ಸಂಚರಿಸಲು ಹಾಗೂ ವಾಹನಗಳು ಯಾವುದೇ ಅಡೆತಡೆಯಿಲ್ಲದೆ ಚಲಿಸಲು ಅಗತ್ಯವಾದ ಜಾಗವನ್ನು ಮುಕ್ತವಾಗಿಡಬೇಕು. ರಸ್ತೆ ಅತಿಕ್ರಮಣದಿಂದ ಸಾರ್ವಜನಿಕರಿಗೆ ತೊಂದರೆಯಾಗುವುದನ್ನು ತಡೆಯಲು ಪೆÇಲೀಸ್ ಇಲಾಖೆ ಕೈಗೊಂಡಿರುವ ಕ್ರಮಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.