
ಮಧುಗಿರಿ, ಸೆ. ೧೩- ಮಧುಗಿರಿ ಕಸಬಾ ಸಿದ್ದಾಪುರ ಗ್ರಾಮದ ಬಳಿ ನಡೆದ ಪದವಿ ಪೂರ್ವ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ಗೌತಮ ಬುದ್ಧ ಪೂರ್ವ ಕಾಲೇಜಿನ ವಿದ್ಯಾರ್ಥಿ ಅಖಿಲ್ ದೇವರಾಜು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಪ್ರಾಂಶುಪಾಲರಾದ ಶ್ರೀನಿವಾಸ್ ತಿಳಿಸಿದ್ದಾರೆ .
ಪಟ್ಟಣಕ್ಕೆ ಸಮೀಪವಿರುವ ಸಿದ್ದಾಪುರ ಗ್ರಾಮದ ಮೈದಾನದಲ್ಲಿ ನಡೆದ ೨೦೨೬. ೨೦೨೭ ನೇ ಶೈಕ್ಷಣಿಕ ಸಾಲಿನ ತಾಲ್ಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ತಾಲ್ಲೂಕಿನ ೨೨ ಕಾಲೇಜುಗಳಿಂದ ಸುಮಾರು ೨೦೦ ಕ್ರೀಡಾಪಟುಗಳು ಭಾಗವಹಿಸಿದ್ದರು.
ಮಧುಗಿರಿ ಗೌತಮ್ ಬುದ್ಧ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಅಖಿಲ್ ದೇವರಾಜ್ ಹೋಬಳಿ ಮಟ್ಟದ ಕ್ರೀಡಾ ಕೂಟಗಳಲ್ಲಿ ಹಾಗೂ ತಾಲ್ಲೂಕು ಮಟ್ಟದ ಕ್ರೀಡಾಕೂಟಗಳಲ್ಲಿ ಹೆಚ್ಚು ಹೆಚ್ಚು ಕ್ರೀಡೆಗಳಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅಖಿಲ್ ದೇವರಾಜು ಅಥ್ಲೆಟಿಕ್ಸ್ ೧೫೦೦ ಮೀಟರ್ ಓಟ ಪ್ರಥಮ ಸ್ಥಾನ ೮೦೦ ಮೀಟರ್ ಓಟದಲ್ಲಿ ಪ್ರಥಮ ಹಾಗೂ ಉದ್ದ ಜಿಗಿತ ದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ತಾಲ್ಲೂಕು ಮಟ್ಟದ ಕ್ರೀಡೆಯಲ್ಲಿ ಗಮನಾರ್ಹ ಸಾಧನೆ ಮಾಡಿರುವ ವಿದ್ಯಾರ್ಥಿ ಅಖಿಲ್ ದೇವರಾಜ್ ರವರನ್ನು ತರಬೇತುದಾರ ದೈಹಿಕ ಶಿಕ್ಷಕರಾದ ಮಧು ಪ್ರಾಂಶುಪಾಲರಾದ ಶ್ರೀನಿವಾಸ್ ಆಡಳಿತ ಮಂಡಳಿ ಹಾಗೂ ಗ್ರಾಮಸ್ಥರು ಇಂತಹ ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ಇನ್ನು ಹೆಚ್ಚು ಹೆಚ್ಚು ಕ್ರೀಡಾಕೂಟಗಳಲ್ಲಿ ಭಾಗವಹಿಸಿ ರಾಷ್ಟ್ರ ಮಟ್ಟದಲ್ಲಿ ಭಾಗವಹಿಸಿ ಜಿಲ್ಲೆಗೆ ಕಾಲೇಜಿಗೆ ತಂದೆ ತಾಯಿಗಳಿಗೆ ಕೀರ್ತಿ ತರಲಿ ಎಂದು ಅಭಿನಂದಿಸಿದ್ದಾರೆ.


































