Home ಜಿಲ್ಲೆ ಹಸಿರು ಪರಿಸರ ನಿರ್ಮಾಣಕ್ಕೆ ಸಾರ್ವಜನಿಕರು ಮುಂದಾಗಬೇಕು: ನ್ಯಾಯಾಧೀಶರು

ಹಸಿರು ಪರಿಸರ ನಿರ್ಮಾಣಕ್ಕೆ ಸಾರ್ವಜನಿಕರು ಮುಂದಾಗಬೇಕು: ನ್ಯಾಯಾಧೀಶರು

ಜಮಖಂಡಿ, ಜೂ 6:ನಗರದ ಕೆಟ್ಟೆಕೇರಿಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಬಾಗಲಕೋಟೆ, ತಾಲೂಕು ಕಾನೂನು ಸೇವಾ ಸಮಿತಿ ಜಮಖಂಡಿ, ನ್ಯಾಯವಾದಿಗಳ ಸಂಘ ಜಮಖಂಡಿ ಹಾಗೂ ಅರಣ್ಯ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಗುರುವಾರ ವಿಶ್ವ ಪರಿಸರ ದಿನಾಚರಣೆಯನ್ನು ಸಸಿ ನೆಡುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಹೆಚ್ಚುವರಿ ಹಿರಿಯ ದಿವಾನಿ ನ್ಯಾಯಾಧೀಶ ಶ್ರೀಕಾಂತ್ ರವಿಚಂದ್ರ ಹಾಗೂ ತಾಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ಪ್ರಧಾನ ದಿವಾನಿ ನ್ಯಾಯಾಧೀಶ ಬಸವರಾಜ ಅವರು ಸಸಿ ನೆಡುವ ಮೂಲಕ ಪರಿಸರ ದಿನಾಚರಣೆಗೆ ಚಾಲನೆ ನೀಡಿದರು. ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದ್ದು, ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸಬೇಕು ಎಂದು ಅವರು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ನ್ಯಾಯವಾದಿಗಳ ಸಂಘದ ಉಪಾಧ್ಯಕ್ಷೆ ವಿ.ಎ. ಭಟ್, ಪ್ರಧಾನ ಕಾರ್ಯದರ್ಶಿ ವೈ.ಕೆ. ಕಡಪಟ್ಟಿ, ಎಸ್.ಎ. ಅಂಬಿ, ಕಾರ್ಯಕಾರಿಣಿ ಸದಸ್ಯರಾದ ಎಸ್.ಕೆ. ದಳವಾಯಿ, ಯು.ಎಸ್. ಚರಕಿ ಹಾಗೂ ಅಳ್ಳಿಕಟ್ಟಿ ಅವರು ಉಪಸ್ಥಿತರಿದ್ದರು.
ಅರಣ್ಯ ಇಲಾಖೆಯ ಪ್ರಾದೇಶಿಕ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪ್ರದೀಪ್ ರಾಠೋಡ, ಸಾಮಾಜಿಕ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಚೆಲುವರಾಜ ನಾಯ್ಕರ್, ಉಪವಲಯ ಅರಣ್ಯಾಧಿಕಾರಿ ವಿನೋದ ಜೈನಾಪುರ, ಶ್ರೀಶೈಲ ಗದ್ದನಕೇರಿ ಸೇರಿದಂತೆ ಇಲಾಖೆಯ ಸಿಬ್ಬಂದಿ, ಗಸ್ತು ಅರಣ್ಯ ಪಾಲಕರು ಹಾಗೂ ನ್ಯಾಯಾಲಯದ ಸಿಬ್ಬಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ವಿಶ್ವ ಪರಿಸರ ದಿನದ ಅಂಗವಾಗಿ ವಿವಿಧ ಜಾತಿಯ ಸಸಿಗಳನ್ನು ನೆಡಲಾಗಿದ್ದು, ಅವುಗಳ ಸಂರಕ್ಷಣೆ ಹಾಗೂ ಪೆÇೀಷಣೆಯ ಜವಾಬ್ದಾರಿಯನ್ನು ವಹಿಸಿಕೊಳ್ಳುವ ಸಂಕಲ್ಪವನ್ನು ಕಾರ್ಯಕ್ರಮದಲ್ಲಿ ಕೈಗೊಳ್ಳಲಾಯಿತು.