ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ

ಹುಬ್ಬಳ್ಳಿ, ಡಿ.21: ಇಂದು ಎಸ್.ಎಸ್.ಕೃಷ್ಣ ನಗರದಲ್ಲಿರುವ ನಮ್ಮ ಕ್ಲಿನಿಕ್ ನಲ್ಲಿ ಪಲ್ಸ್ ಪೆÇೀಲಿಯೋ ಕಾರ್ಯಕ್ರಮಕ್ಕೆ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಪ್ರಸಾದ ಅಬ್ಬಯ್ಯ ಹಾಗೂ ಪಾಲಿಕೆ ಸದಸ್ಯೆ ಫಾಮೀದಾ ಕಾರಡಗಿ ಅವರು ಚಾಲನೆ ನೀಡಿದರು.

ನಂತರ ಮಾತನಾಡಿದ ಪೆÇೀಲಿಯೋ ಹನಿ ಹಾಕಿಸುವುದರಿಂದ ಮಕ್ಕಳು ಅಂಗವಿಕಲತೆಗೆ ಒಳಗಾಗುವುದಿಲ್ಲ. ಹೀಗಾಗಿ ಕಡ್ಡಾಯವಾಗಿ ಮಕ್ಕಳಿಗೆ ಎರಡು ಹನಿ ಪೆÇೀಲಿಯೋ ಹಾಕಿಸಬೇಕು ಎಂದರು.

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರಾದ ಡಾ.ರುದ್ರೇಶ ಘಾಳಿ ಮಾತನಾಡಿ, ಜಿಲ್ಲೆಯ ಸುಮಾರು 1.23 ಲಕ್ಷ ಮಕ್ಕಳು ಪಾಲಿಕೆ ವ್ಯಾಪ್ತಿಯಲ್ಲಿ ಬರುತ್ತಾರೆ. ಜಿಲ್ಲೆಯ ಶೇ.60 ರಷ್ಟು ಮಕ್ಕಳು ಇಲ್ಲಿದ್ದಾರೆ. ಮಕ್ಕಳಿಗೆ ಕಡ್ಡಾಯವಾಗಿ ಪೆÇೀಲಿಯೋ ಹನಿ ಹಾಕಿಸಬೇಕು. ಇಲ್ಲಿನ ಜನರಿಗೆ ಅನುಕೂಲವಾಗುವಂತೆ ಆಸ್ಪತ್ರೆ ನಿರ್ಮಿಸಲಾಗಿದೆ. ಪೆÇೀಲಿಯೋ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಸ್.ಎಂ.ಹೊನಕೇರಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ವೈದ್ಯಾಧಿಕಾರಿ ಡಾ.ಶ್ರೀಧರ ದಂಡಪ್ಪನವರ, ತಾಲೂಕು ವೈದ್ಯಾಧಿಕಾರಿ ಡಾ.ಹುಲಗಣ್ಣ ಇಂಜಗನರಿ, ತಾಲೂಕು ಆರೋಗ್ಯ ನಿರೀಕ್ಷಣಾಧಿಕಾರಿ ಓಂಕಾರಗೌಡರ, ಡಾ.ಪ್ರವೀಣ ಗೌರಿ, ಮುಖಂಡರಾದ ಶಬ್ಬೀರ್ ಸೇರಿದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು, ಪಾಲಿಕೆಯ ಅಧಿಕಾರಿಗಳು, ಆಶಾ ಕಾರ್ಯಕರ್ತರು ಸಾರ್ವಜನಿಕರು ಇತರರು ಭಾಗವಹಿಸಿದ್ದರು.
ಆರ್.ಬಿ.ಎಸ್.ಕೆ ವೈದ್ಯರಾದ ಡಾ.ಬಸವರಾಜ ಕಮಡೊಳ್ಳಿ ಸ್ವಾಗತಿಸಿ, ಕಾರ್ಯಕ್ರಮವನ್ನು ನಿರ್ವಹಿಸಿದರು.