Home Lead News ಪ್ರಶ್ನೆ ಪತ್ರಿಕೆ ಸೋರಿಕೆ : ತ್ವರಿತ ನ್ಯಾಯಾಲಯ

ಪ್ರಶ್ನೆ ಪತ್ರಿಕೆ ಸೋರಿಕೆ : ತ್ವರಿತ ನ್ಯಾಯಾಲಯ

ನವದೆಹಲಿ, ಜು.೨೩: ಪ್ರಶ್ನೆ ಪ್ರತಿಕೆ ಸೋರಿಕೆ ಪ್ರಕರಣಗಳ ಶೀಘ್ರ ವಿಚಾರಣೆಗೆ ತ್ವರಿತ ನಾಯ್ಯಾಲಯ ಸ್ಥಾಪಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಪ್ರಕಟಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ಭಾಗಿಯಾದವರಿಗೆ ತ್ವರಿತ ಹಾಗೂ ಕಠಿಣ ಶಿಕ್ಷೆ ವಿಧಿಸುವುದನ್ನು ಖಚಿತ ಪಡಿಸಲು ತ್ವರಿತ ನ್ಯಾಯಾಲಯ ಸ್ಥಾಪಿಸಲು ನಿರ್ಧರಿಸಿದ್ದೇವೆ ಎಂದು ಹೇಳಿದ್ದಾರೆ.


ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪನೆ ಸಂಬಂಧ ಎಲ್ಲಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.


ವಿದ್ಯಾರ್ಥಿಗಳ ಹಿತಾಸಕ್ತಿಗಳನ್ನು ರಕ್ಷಿಸುವ ನಿಟ್ಟಿನಲ್ಲಿ ನಾವು ಕೈಗೊಳ್ಳುತ್ತಿರುವ ಸರಣಿ ಕ್ರಮಗಳಲ್ಲಿ ತ್ವರಿತ ನ್ಯಾಯಾಲಯ ಸ್ಥಾಪನೆ ಒಂದಾಗಿದೆ ಎಂದು ಅವರು ತಿಳಿಸಿದ್ದಾರೆ.


ವಿದ್ಯಾರ್ಥಿಗಳ ಹಿತಾಸಕ್ತಿಗಳನ್ನು ಕಾಪಾಡುವ ನಮ್ಮ ಸರಣಿ ಕ್ರಮಗಳು ಮುಂದುವರಿಯುತ್ತವೆ. ನಮ್ಮ ಯುವಕರ ಭವಿಷ್ಯಕ್ಕೆ ಹಾನಿ ಮಾಡಲು ಪ್ರಯತ್ನಿಸುವವರನ್ನು ಬಿಡಲಾಗುವುದಿಲ್ಲ ಎಂದು ಗುಡುಗಿದ್ದಾರೆ


ಸಾಮಾಜಿಕ ಮಾಧ್ಯಮ ವೇದಿಕೆ ಕಾಕ್ರೋಚ್ ಜನತಾ ಪಕ್ಷ ಮತ್ತು ವಿರೋಧ ಪಕ್ಷಗಳ ಪ್ರತಿಭಟನೆಗಳು ಮತ್ತು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಬೇಡಿಕೆಗಳ ಮಧ್ಯೆ ಪ್ರಧಾನಿ ಮೋದಿಯವರ ಘೋಷಣೆ ಹೊರಬಿದ್ದಿದೆ.

ತ್ವರಿತ ನ್ಯಾಯಾಲಯವಲ್ಲ, ರಾಜೀನಾಮೆ ಬೇಕು


ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪಿಸುವ ಪ್ರಧಾನಿ ನರೇಂದ್ರ ಮೋದಿ ಅವರ ನಿರ್ಧಾರವನ್ನು ತಿರಸ್ಕರಿಸಿರುವ ಜನತಾ ಪಕ್ಷ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂಬ ತನ್ನ ಬೇಡಿಕೆಯನ್ನು ಪುನರುಚ್ಚರಿಸಿದೆ..


ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ಭಾಗಿಯಾದವರಿಗೆ ಶಿಕ್ಷೆ ಕೊಡಿಸಲು ತ್ವರಿಂತ ನ್ಯಾಯಾಲಯ ಸ್ಥಾಪಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿರುವ ಸಿಜೆಪಿ, ನಮಗೆ ತ್ವರಿತ ನ್ಯಾಯಾಲಯಕ್ಕಿಂತ ನಮಗೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೇಕು ಎಂದು ಸಿಜೆಪಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದೆ.

ರಾಗಾ ಪ್ರತಿಕ್ರಿಯೆ

ಪ್ರಧಾನಿಯವರ ಘೋಷಣೆಯ ಕೆಲವೇ ನಿಮಿಷಗಳಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಪ್ರಧಾನಿಯವರು ವಿದ್ಯಾರ್ಥಿಗಳ ಭವಿಷ್ಯಕ್ಕೆ ಹಾನಿ ಉಂಟು ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ


ನಮ್ಮ ಯುವಕರ ಭವಿಷ್ಯಕ್ಕೆ ಹೆಚ್ಚು ಹಾನಿ ಮಾಡಿದವರು ನೀವೇ. ನಮ್ಮ ಶಿಕ್ಷಣ ವ್ಯವಸ್ಥೆಯ ಸಂಪೂರ್ಣ ಸೆರೆಹಿಡಿಯುವಿಕೆ ಮತ್ತು ನಾಶವನ್ನು ನೀವು ಅನುಮತಿಸಿದ್ದೀರಿ ಮತ್ತು ಪ್ರೋತ್ಸಾಹಿಸಿದ್ದೀರಿ ಮತ್ತು ಅದಕ್ಕೆ ಕಾರಣರಾದ ಪ್ರತಿಯೊಬ್ಬ ವ್ಯಕ್ತಿಯನ್ನು ರಕ್ಷಿಸಿದ್ದೀರಿ ಎಂದು ಪ್ರಧಾನಿ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.


ಸಚಿವ ಸ್ಥಾನದಿಂದ ಧರ್ಮೇಂದ್ರ ಪ್ರಧಾನ್ ಅವರನ್ನು ವಜಾಗೊಳಿಸಿ.ವಿದ್ಯಾರ್ಥಿಗಳಲ್ಲಿ ಕ್ಷಮೆಯಾಚಿಸಿ ಮತ್ತು ಅವರ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ


ಕಳೆದ ೧೦ ವರ್ಷಗಳಲ್ಲಿ ೧೫೦ ಕ್ಕೂ ಹೆಚ್ಚು ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನಿನ್ನೆ ಹೇಳಿದ್ದರು, ಆದರೆ ಈ ಪ್ರಕರಣಗಳಲ್ಲಿ ಒಂದೇ ಒಂದು ಶಿಕ್ಷೆಯಾಗಿಲ್ಲ ಎಂದು ತಿಳಿಸಿದ್ದಾರೆ.