
ಕಲಬುರಗಿ,ಆ.8-ನಗರದ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಆ.9 ರಂದು ಬೆಳಿಗ್ಗೆ 10 ಗಂಟೆಗೆ ಕ್ವಿಟ್ ಇಂಡಿಯಾ ಆಂದೋಲನ (ಭಾರತ ಬಿಟ್ಟು ತೋಲಗಿ ಚಳುವಳಿ) ಕಾರ್ಯಕ್ರಮವನ್ನು ಆಚರಣೆ ಮಾಡಲಾಗುವದು.
ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಹಾಲಿ ಹಾಗೂ ಮಾಜಿ ಸಂಸದರು, ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ನಿಗಮ/ಮಂಡಳಿ/ಪ್ರಾಧಿಕಾರದ ಅಧ್ಯಕ್ಷರು, ಮುಖಂಡರು, ಕೆಪಿಸಿಸಿ ಹಾಗೂ ಡಿಸಿಸಿ ಪದಾಧಿಕಾರಿಗಳು ಹಾಗೂ ಸದಸ್ಯರು, ಜಿಲ್ಲಾ ಕಾಂಗ್ರೆಸ್ ಸಮಿತಿ ಮಾಜಿ ಅಧ್ಯಕ್ಷರು, ಡಿಸಿಸಿ ಡೇಲಿಗೇಟ ಸದಸ್ಯರು, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಜಿಲ್ಲಾ ಕಾಂಗ್ರೆಸ್ ಸಮಿತಿ ವಿವಿಧ ಮೂಂಚೂಣಿ ಘಟಕ, ವಿಭಾಗಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾಯಿತ ಹಾಲಿ ಹಾಗೂ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು, ಎಪಿಎಂಸಿಯ ಹಾಲಿ ಹಾಗೂ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು, ಮಹಾ ನಗರ ಪಾಲಿಕೆಯ ಹಾಲಿ ಹಾಗೂ ಮಾಜಿ ಪೂಜ್ಯ ಮಹಾಪೌರರು, ಉಪ ಮಹಾಪೌರರು ಹಾಗೂ ಸದಸ್ಯರುಗಳು, ಮಹಿಳೆಯರು, ಯುವಕರು ಕಾಂಗ್ರೆಸ್ ಪಕ್ಷದ ಎಲ್ಲಾ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಜಗದೇವ ಗುತ್ತೇದಾರ ಕಾಳಗಿ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.































