
ಕೆ.ಆರ್.ಪುರ, ಸೆ.೨೫- ಕೆ.ಆರ್.ಪುರ ಕ್ಷೇತ್ರದ ಕೊತ್ತನೂರಿನ ಬಿಜೆಪಿ ಮುಖಂಡ ರಾಘವೇಂದ್ರ ಪಟೇಲ್ ಅವರು ಸಚಿವರಾದ ಬೈರತಿ ಸುರೇಶ್ ಅವರ ಸಮ್ಮುಖದಲ್ಲಿ ಪೂರ್ವ ಜಿಲ್ಲಾ ಅಧ್ಯಕ್ಷ ಡಿ.ಕೆ.ಮೋಹನ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಮರಳಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಬೈರತಿ ಸುರೇಶ್ ಅವರು ಮುಂದಿನ ಚುನಾವಣೆಯಲ್ಲಿ ಕೆ.ಆರ್.ಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶಾಸಕರಾಗಿ ಆಯ್ಕೆಯಾಗುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕ್ಷೇತ್ರದ ಮುಖಂಡರಾದ ರಾಘವೇಂದ್ರ ಪಟೇಲ್ ಸೇರಿದಂತೆ ಹಲವು ಮುಖಂಡರು ಮಾತೃ ಪಕ್ಷಕ್ಕೆ ಮರಳಿದ್ದು,ಪಕ್ಷಕ್ಕೆ ಆನೆಬಲ ಬಂದಿದೆ ಎಂದು ನುಡಿದರು.
ಪೂರ್ವ ಜಿಲ್ಲಾ ಅಧ್ಯಕ್ಷ ಡಿ.ಕೆ.ಮೋಹನ್ ಅವರು ಮಾತನಾಡಿ ಎ.ನಾರಾಯಣಪುರ ವಾರ್ಡ್ನಲ್ಲಿ ಕಾಂಗ್ರೆಸ್ ಪಕ್ಷದ ವರ್ಚಸ್ಸನ್ನು ಹೆಚ್ಚಿಸುವ ಮುಖಂಡರಾದ ರಾಘವೇಂದ್ರ ಪಟೇಲ್ ಪಕ್ಷ ಸೇರ್ಪಡೆ ಪಕ್ಷದ ಸಂಘಟನೆಗೆ ಹೆಚ್ಚು ಸಹಕಾರಿಯಾಗಿದೆ ಎಂದು ಹೇಳಿದರು.
ಕೆ.ಆರ್.ಪುರ ಕಾಂಗ್ರೆಸ್ ಭದ್ರಕೋಟೆಯಾಗಿದ್ದು, ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮುಖಂಡರಾದ ಬೈರತಿ ಮುನಿರಾಜು, ಸಿ.ವೆಂಕಟೇಶ್, ಅಗರ ಪ್ರಕಾಶ್, ಹೇಮಾವತಿ ಸುರೇಶ್, ಗುರುದಾಸ್, ಆದಿನಾರಾಯಣ್, ಕೇಶವ, ಆಕಾಶ್, ಪುರುಷೋತ್ತಮ್ ಬಾಬು ಇದ್ದರು.


























