ಮಳೆ, ಪ್ರವಾಹ: ಸೂಕ್ತ ಕ್ರಮ ಕೈಗೊಳ್ಳಲು ಅಧಿಕಾರಿಗಳಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ

ಕಲಬುರಗಿ,ಅ.2-ಜಿಲ್ಲೆಯಲ್ಲಿ ಮಳೆ ಹಾಗೂ ಪ್ರವಾಹ ಹಿನ್ನೆಲೆ ಸೂಕ್ತ ಕ್ರಮವಹಿಸುವಂತೆ ಅಧಿಕಾರಿಗಳಿಗೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ನೀಡಿದ್ದಾರೆ.
ಜಿಲ್ಲೆಯಲ್ಲಿ ಸೆಪ್ಟೆಂಬರ ತಿಂಗಳಲ್ಲಿ ಶೇ. 63 ರಷ್ಟು ಹೆಚ್ಚು ಮಳೆ ತುರ್ತು ಪರಿಹಾರ, ಮುಂಜಾಗರೂಕತ ಕ್ರಮ ತೆಗೆದುಕೊಳ್ಳಲು ಸಚಿವರು ಸೂಚನೆ ನೀಡಿದ್ದಾರೆ.
ಅತಿವೃಷ್ಟಿ ಹಾಗೂ ಪ್ರವಾಹದಂತಹ ಆಕಸ್ಮಿಕಗಳು ಸಂಭವಿಸಿದ ಸಂದರ್ಭಗಳಲ್ಲಿ ಅಧಿಕಾರಿಗಳು ವಿವೇಚನೆಯಿಂದ ವರ್ತಿಸಿ, ಲಭ್ಯವಿರುವ ಅನುದಾನವನ್ನು ಬಳಸಿಕೊಂಡು ತುರ್ತು ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕು ಹಾಗೂ ತಾತ್ಕಾಲಿಕ ವಸತಿ, ಆಹಾರ ಸರಬರಾಜು ಸೌಲಭ್ಯಗಳನ್ನು ಕೂಡಲೇ ಒದಗಿಸಲು ನಿರ್ಧರಿಸಬೇಕು ಎಂದು ಜಿಲ್ಲಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಜಿಲ್ಲೆಯಲ್ಲಿ 2025ರ ಆಗಸ್ಟ್ ತಿಂಗಳಲ್ಲಿ ಶೇ. 69 ರಷ್ಟು ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಶೇ.63 ರಷ್ಟು ವಾಡಿಕೆಗಿಂತಲೂ ಹೆಚ್ಚಿನ ಮಳೆಯಾಗಿದ್ದು, ಕಳೆದ ಮೂರು ದಿನಗಳಿಂದ ಜಿಲ್ಲೆಯಲ್ಲಿ ಸುರಿದ ಅಧಿಕ ಮಳೆಯಿಂದ ಆಗಿರುವ ಪರಿಣಾಮಗಳು ಹಾಗೂ ಅವುಗಳನ್ನು ಸಮರ್ಪಕವಾಗಿ ಎದುರಿಸುವ ಸಂಬಂಧ ಕಲುಬುರಗಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಹಲವು ಸೂಚನೆಗಳು ನೀಡಿದ್ದಾರೆ.