ನಾಳೆಯಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆ

ಬೆಂಗಳೂರು,ನ.೪-ನಾಳೆಯಿಂದ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.


ಹೀಗಾಗಿ ಬುಧವಾರದಿಂದ ಮತ್ತೆ ವರುಣಾಬ್ಬರ ಆರಂಭವಾಗಲಿದೆ. ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ವರುಣನ ಪ್ರಭಾವ ತೀವ್ರವಾಗಿರುತ್ತದೆ. ಮೀನುಗಾರರು ಸಮುದ್ರಕ್ಕೆ ಇಳಿಯುವ ಮೊದಲು ಎಚ್ಚರಿಕೆ ವಹಿಸುವಂತೆ ಸಲಹೆ ನೀಡಲಾಗಿದೆ.


ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.


ಕಳೆದ ವಾರ, ಮೋಂಥಾ ಚಂಡಮಾರುತವು ರಾಜ್ಯಕ್ಕೆ ಭಾರೀ ಮಳೆಯನ್ನು ತಂದಿದೆ ಇತ್ತೀಚೆಗೆ, ಮಳೆ ಗಮನಾರ್ಹವಾಗಿ ಕಡಿಮೆಯಾಗಿದ್ದ ಮಳೆ ನವೆಂಬರ್ ೫ ರಿಂದ ಮತ್ತೆ ಆರಂಭವಾಗಲಿದೆ.


ಭಾರೀ ಮಳೆಯಿಂದಾಗಿ, ಸಾರ್ವಜನಿಕರು ಮತ್ತು ಮೀನುಗಾರರು ಜಾಗರೂಕರಾಗಿರುವಂತೆ ಸೂಚಿಸಲಾಗಿದೆ. ದೀಪಾವಳಿಯ ನಂತರ ಕೆಲವು ಜಿಲ್ಲೆಗಳಲ್ಲಿ ಬಿಸಿಲಿನ ಪ್ರಮಾಣ ತೀವ್ರಗೊಂಡಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಶಾಖ ಹೆಚ್ಚುತ್ತಿದೆ. ಆದರೆ, ನವೆಂಬರ್ ೫ ರಿಂದ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.