Home ಜಿಲ್ಲೆ ಬೆಂಗಳೂರು ರಾಜೀವ್ ಗಾಂಧಿ ಸಮುದಾಯ ಭವನ ಅನೈತಿಕ ತಾಣ

ರಾಜೀವ್ ಗಾಂಧಿ ಸಮುದಾಯ ಭವನ ಅನೈತಿಕ ತಾಣ

ಬಂಗಾರಪೇಟೆ: ,೬- ನಗರಸಭೆ ವ್ಯಾಪ್ತಿಯ ಸಂಜಯ್ ಗಾಂಧಿನಗರದಲ್ಲಿರುವ ರಾಜೀವ್ ಗಾಂಧಿ ಸಮುದಾಯ ಭವನವು ಸಾರ್ವಜನಿಕರ ಉಪಯೋಗಕ್ಕಾಗಿ ನಿರ್ಮಿಸಲಾದ ಆಸ್ತಿ ಆಗಿದ್ದರೂ, ಪ್ರಸ್ತುತ ಅದು ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಟ್ಟಿರುವುದು ಸ್ಥಳೀಯರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ ಎಂದು ಕರ್ನಾಟಕ ದಲಿತ ರೈತಸೇನೆ ಅಧ್ಯಕ್ಷ ಹುಣಸನಹಳ್ಳಿ ಎನ್.ವೆಂಕಟೇಶ್ ಅವರು ಒತ್ತಾಯಿಸಿದರು.


ನಗರದ ನಗರಸಭೆ ಪೌರಾಯುಕ್ತರಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, ಈ ಸಮುದಾಯ ಭವನವನ್ನು ೨೦೧೪ರಲ್ಲಿ ಐ.ಡಿ.ಎಸ್.ಎಂ.ಟಿ ಯೋಜನೆಯಡಿ ಸಾರ್ವಜನಿಕರ ಸೌಕರ್ಯಕ್ಕಾಗಿ ನಿರ್ಮಿಸಲಾಗಿತ್ತು.

ಆದರೆ ಕಳೆದ ಕೆಲವು ವರ್ಷಗಳಿಂದ ಈ ಭವನವು ಸರಿಯಾದ ನಿರ್ವಹಣೆ ಕೊರತೆಯಿಂದ ನಿರ್ಲಕ್ಷ್ಯಕ್ಕೊಳಗಾಗಿ, ಸಮಾಜದ ಹಿತಾಸಕ್ತಿಗೆ ವಿರುದ್ಧವಾಗಿ ಬಳಸಲಾಗುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿವೆ.

ಸಾರ್ವಜನಿಕ ಕಾರ್ಯಕ್ರಮಗಳು, ಸಭೆಗಳು, ಸಾಮಾಜಿಕ ಚಟುವಟಿಕೆಗಳಿಗೆ ಬಳಸಬೇಕಾದ ಈ ಸ್ಥಳವು ಈಗ ಅಸಭ್ಯ ಹಾಗೂ ಅನೈತಿಕ ಚಟುವಟಿಕೆಗಳಿಗೆ ವೇದಿಕೆಯಾಗಿರುವುದು ದುರಂತಕರ ಪರಿಸ್ಥಿತಿ ಉಂಟಾಗಿದೆ ಎಂದರು.


ಈ ವಿಷಯವನ್ನು ಹಲವಾರು ಬಾರಿ ಸ್ಥಳೀಯ ಪತ್ರಿಕೆಗಳು ವರದಿ ಮಾಡಿದ್ದರೂ, ಹಾಗೂ ವಿವಿಧ ಸಂಘಟನೆಗಳು ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ, ಸಂಬಂಧಧಪಟ್ಟ ಅಧಿಕಾರಿಗಳು ಯಾವುದೇ ಪರಿಣಾಮಕಾರಿ ಕ್ರಮ ಕೈಗೊಂಡಿಲ್ಲ, ಸರ್ಕಾರದ ಆಶಯಗಳನ್ನು ಉಳಿಸುವ ಉದ್ದೇಶದಿಂದ ನಿರ್ಮಿಸಲಾದ ಸಮುದಾಯ ಭವನವನ್ನು ಇಂತಹ ಅನೈತಿಕ ಚಟುವಟಿಕೆಗಳಿಗೆ ಬಿಡುವುದು ಅಸಹ್ಯಕರ. ಸಂಬ೦ಧಪಟ್ಟ ಅಧಿಕಾರಿಗಳು ತಕ್ಷಣ ಎಚ್ಚರಗೊಂಡು ಭವನವನ್ನು ದುರಸ್ತಿಗೊಳಿಸಿ, ಸಾರ್ವಜನಿಕ ಉಪಯೋಗಕ್ಕೆ ಮರು ಮೀಸಲಿಡಬೇಕು ಎಂದು ಆಗ್ರಹಿಸಿದರು.


ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸದಿದ್ದರೆ, ಮುಂದಿನ ದಿನಗಳಲ್ಲಿ ಸಂಘಟನೆಗಳ ವತಿಯಿಂದ ತೀವ್ರ ಹೋರಾಟ ಹಮ್ಮಿಕೊಳ್ಳಲಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.


ಸರ್ಕಾರದ ಅನೇಕ ಅಭಿವೃದ್ಧಿ ಯೋಜನೆಗಳ ಅಡಿಯಲ್ಲಿ ನಿರ್ಮಿಸಲಾದ ಸಾರ್ವಜನಿಕ ಆಸ್ತಿಗಳು ಸರಿಯಾದ ನಿರ್ವಹಣೆ ಇಲ್ಲದೆ ಹಾಳಾಗುತ್ತಿರುವುದು ಚಿಂತಾಜನಕವಾಗಿದೆ. ಸಂಬ೦ಧಪಟ್ಟ ಅಧಿಕಾರಿಗಳು ಈ ಪ್ರಕರಣವನ್ನು ತಕ್ಷಣ ಗಮನಿಸಿ, ಸೂಕ್ತ ಕ್ರಮ ಕೈಗೊಳ್ಳುವ ಮೂಲಕ ಸಾರ್ವಜನಿಕರ ಉಪಯೋಗಕ್ಕೆ ಉಳಿಸಿಕೊಳ್ಳಬೇಕಾಗಿದೆ ಎಂದರು.


ಈ ವೇಳೆ ಜಿಲ್ಲಾಧ್ಯಕ್ಷ ರಾಜುಕೋಟಿ, ಹುಣಸನಹಳ್ಳಿ ಸತೀಶ್, ಕೊಂಡನಹಳ್ಳಿ ರವಿ, ಕಾರಮಾನಹಳ್ಳಿ ಅಶೋಕ್ ಹಾಗೂ ಇನ್ನಿತರರು ಇದ್ದರು.