ವೀರಶೈವ ಲಿಂಗಾಯತ ನಿಗಮಕ್ಕೆ ರಾಜಕುಮಾರ ತರಿ ನೇಮಕ

ಬೀದರ್: ಅ.೩೦:ಚಿಟಗುಪ್ಪ ತಾಲ್ಲೂಕಿನ ಮೀನಕೇರಾದ ರಾಜಕುಮಾರ ತರಿ ಅವರನ್ನು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ನಿಯಮಿತದ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ೧ ಆರ್. ಲತಾ ಮುಂದಿನ ಆದೇಶದ ವರೆಗೆ ಈ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
೪೭ ವರ್ಷದ ರಾಜಕುಮಾರ ತರಿ ಒಂದೂವರೆ ದಶಕದಿಂದ ಕಾಂಗ್ರೆಸ್ ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಸದ್ಯ ಕಾಂಗ್ರೆಸ್ ಜಿಲ್ಲಾ ಘಟಕದ ಕಾರ್ಯದರ್ಶಿಯಾಗಿದ್ದಾರೆ.
ತಮ್ಮನ್ನು ನಿಗಮದ ನಿರ್ದೇಶಕರಾಗಿ ನೇಮಕ ಮಾಡಿದ್ದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಅರಣ್ಯ ಸಚಿವ ಈಶ್ವರ ಖಂಡ್ರೆ, ನಿಗಮದ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್, ಮಾಜಿ ಶಾಸಕ ಅಶೋಕ ಖೇಣಿ ಹಾಗೂ ಪಕ್ಷದ ಮುಖಂಡರಿಗೆ ಅವರು ಕೃತಜ್ಞತೆ ತಿಳಿಸಿದ್ದಾರೆ.