Home ಮುಖಪುಟ ಸುದ್ದಿ ರಂಗೇರಿದ ಪರಿಷತ್ ಚುನಾವಣೆ

ರಂಗೇರಿದ ಪರಿಷತ್ ಚುನಾವಣೆ

ಕೈ- ಜೆಡಿಎಸ್ ಸಮರಕ್ಕೆ ವೇದಿಕೆ
ಬೆಂಗಳೂರು, ಜೂ. ೮- ರಾಜ್ಚ ವಿಧಾನಸಭೆಯಿಂದ ವಿಧಾನಪರಿಷತ್‌ನ ೭ ಸ್ಥಾನಗಳಿಗೆ ನಡೆಯುವ ಚುನಾವಣೆ ರಂಗೇರಿದ್ದು, ಈ ಚುನಾವಣೆಯಲ್ಲಿ ಅಭ್ಯರ್ಥಿಯಾಗಿ ಜೆಡಿಎಸ್ ೮ನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ಈ ಮೂಲಕ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಮತ್ತೊಂದು ಸಮರಕ್ಕೆ ವೇದಿಕೆ ಅಣಿಯಾಗಿದೆ.


ವಿಧಾನಪರಿಷತ್‌ನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಐದು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಬಿಜೆಪಿ ತನ್ನ ಅಧಿಕೃತ ಇಬ್ಬರು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ ,೭ನೇ ಸ್ಥಾನಕ್ಕೆ ಈಗ ಕಾಂಗ್ರೆಸ್‌ನ ಐದನೇ ಅಭ್ಯರ್ಥಿ ಹಾಗೂ ಜೆಡಿಎಸ್ ಅಭ್ಯರ್ಥಿ ನಡುವೆ ಸ್ಪರ್ಧೆ ಏರ್ಪಟಿದ್ದು ಗೆಲುವು ಯಾರಿಗೆ ದಕ್ಕಲಿದೆ ಎಂಬುದು ಕುತೂಹಲ ಮೂಡಿಸಿದೆ.
ಕಾಂಗ್ರೆಸ್‌ನ ನಾಲ್ವರು ಅಭ್ಯರ್ಥಿಗಳಾದ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್, ತಿಪ್ಪಣ್ಣ ಕಮಕನೂರು, ಪಿ.ವಿ. ಮೋಹನ್, ಶಿವಣ್ಣ ಮಳವಳ್ಳಿ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿತ್ತು. ಇವರುಗಳೆಲ್ಲಾ ಈಗಾಗಲೇ ನಾಮಪತ್ರ ಸಲ್ಲಿಸಿದ್ದರಾದರೂ ಕಾಂಗ್ರೆಸ್‌ನ ಐದನೇ ಅಭ್ಯರ್ಥಿಯಾಗಿ ಕೆಪಿಸಿಸಿ ಖಂಜಾಚಿ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ಆಪ್ತ ವಿನಯ್ ಕಾರ್ತಿಕ್ ಅವರನ್ನು ಆಯ್ಕೆ ಮಾಡಲಾಗಿತ್ತು ಅವರು ಇಂದು ತಮ್ಮ ನಾಮಪತ್ರ ಸಲ್ಲಿಸಿದರು


ಬಿಜೆಪಿಯಿಂದ ವಿಧಾನಪರಿಷತ್‌ನ ಎರಡು ಸ್ಥಾನಗಳಿಗೆ ಪಕ್ಷದ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜಪಾಟೀಲ್ ಹಾಗೂ ರಘು ಕೌಟಿಲ್ಯ ಅವರನ್ನು ಆಯ್ಕೆ ಮಾಡಿದ್ದು, ಇವರಿಬ್ಬರುಇಂದು ತಮ್ಮ ನಾಮಪತ್ರ ಸಲ್ಲಿಸಿದರು.


ಈ ಮೊದಲು ೮ನೇ ಅಭ್ಯರ್ಥಿಯನ್ನು ನಿಲ್ಲಿಸಲು ಆಷ್ಟೇನೂ ಆಸಕ್ತಿ ತೋರದಿದ್ದ ಜೆಡಿಎಸ್, ಕಾಂಗ್ರೆಸ್‌ನ ವಿನಯ್ ಕಾರ್ತಿಕ್ ನಾಮಪತ್ರ ಸಲ್ಲಿಸುತ್ತಿದ್ದಂತೆಯ ಜೆಡಿಎಸ್‌ನಿಂದ ೮ನೇ ಅಭ್ಯರ್ಥಿಯಾಗಿ ಮಾಜಿ ವಿಧಾನಪರಿಷತ್ ಸದಸ್ಯ ಗೋವಿಂದರಾಜು ನಾಮಪತ್ರ ಸಲ್ಲಿಸಿದರು. ಹಾಗಾಗಿ ವಿಧಾನಪರಿಷತ್ ಚುನಾವಣಾ ಕಣ ರಂಗೇರಿದ್ದು, ಕಾರ್ತಿಕ್ ವಿನಯ್ ಹಾಗೂ ಗೋವಿಂದರಾಜು ನಡುವೆ ಗೆಲುವಿಗೆ ಪೈಪೋಟಿ ಇದ್ದು, ಎರಡೂ ಪಕ್ಷಗಳಿಗೂ ತಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಲು ಕೆಲವು ಮತಗಳ ಅವಶ್ಯಕತೆ ಇದ್ದು, ಇದನ್ನು ಹೇಗೆ ಕ್ರೂಢೀಕರಿಸುತ್ತವೆ ಎಂಬುದು ಕುತೂಹಲ ಮೂಡಿಸಿದೆ.

ರಾಜ್ಯಸಭಾ ಚುನಾವಣೆ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ


ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಲ್ಗಿ ಈ ತಿಂಗಳ ೧೮ ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಲೋಕಸೇವಾ ಆಯೋಗದ ಮಾಜಿ ಸದಸ್ಯ ಎಂ. ನಾಗರಾಜು ಇಂದು ತಮ್ಮ ನಾಪತ್ರ ಸಲ್ಲಿಸಿದರು


ಕಾಂಗ್ರೆಸ್‌ನಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನಖರ್ಗೆ, ಎಐಸಿಸಿ ವಕ್ತಾರ ಪವನ್ ಖೇರಾ, ಹಾಗೂ ಮನ್ಸೂರ್ ಆಲಿಖಾನ್ ಇವರುಗಳು ತಮ್ಮ ನಾಮಪತ್ರ ಸಲ್ಲಿಸಿದ್ದು, ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗುವ ಸಾಧ್ಯತೆಗಳಿವೆ.
ನಾಲ್ಕು ಸ್ಥಾನಗಳಿಗೆ ಕಾಂಗ್ರೆಸ್‌ನಿಂದ ಮೂವರು, ಬಿಜೆಪಿಯಿಂದ ಒಬ್ಬರು ಹಾಗೂ ಪಕ್ಷೇತರದ ಅಭ್ಯರ್ಥಿ ಒಬ್ಬರು ನಾಮಪತ್ರ ಸಲ್ಲಿಸಿದ್ದರಾದರೂ ಪಕ್ಷೇತರ ಅಭ್ಯರ್ಥಿಗೆ ಶಾಸಕರ ಬೆಂಬಲ ಸಿಗದ ಕಾರಣ ಕಾಂಗ್ರೆಸ್‌ನ ಮಲ್ಲಿಕಾರ್ಜುನಖರ್ಗೆ, ಫವನ್ ಖೇರಾ, ಮನ್ಸೂರ್ ಆಲಿಖಾನ್ ಮತ್ತು ಬಿಜೆಪಿಯ ಎಂ. ನಾಗರಾಜು ಅವಿರೋಧವಾಗಿ ಆಯ್ಕೆಯಾಗುವುದು ಬಹುತೇಕ ನಿಶ್ಚಿತ.