
ಕಲಬುರಗಿ,ನ.26-ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪಿಗೆ ಇಲ್ಲಿನ ಜಿಲ್ಲಾ ಮತ್ತು ಸತ್ರ ವಿಶೇಷ ಪೋಕ್ಸೋ ನ್ಯಾಯಾಲಯವು 20 ವರ್ಷಗಳ ಕಠಿಣ ಶಿಕ್ಷೆ ಮತ್ತು 1.75 ಲಕ್ಷ ದಂಡ ಹಾಗೂ ಎಸ್‍ಸಿ/ಎಸ್‍ಟಿ ಕಾಯ್ದೆ ಅಡಿಯಲ್ಲಿ 1 ವರ್ಷ ಸಾಧಾ ಶಿಕ್ಷೆ ವಿಧಿಸಿದೆ.
ಚಿತ್ತಾಪುರದ ಆಶ್ರಯ ಕಾಲೋನಿಯ ಮಹ್ಮದ್ ಗೌಸ್ ತಂದೆ ಮಹ್ಮದ್ ಯೂಸುಫ್ ಗೌಂಡಿ ಶಿಕ್ಷೆಗೆ ಗುರಿಯಾದ ಆರೋಪಿ. ಈತ 2024ರಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಬಗ್ಗೆ ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖಾಧಿಕಾರಿ ಶಂಕರಗೌಡ ಪಾಟೀಲ ಅವರು ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಜಿಲ್ಲಾ ಮತ್ತು ಸತ್ರ ವಿಶೇಷ ಪೋಕ್ಸೋ ನ್ಯಾಯಾಲದ ನ್ಯಾಯಾಧೀಶ ಮಹಮ್ಮದ ಮುಜೀರ್ ಉಲ್ಲಾ ಸಿ.ಜಿ.ಅವರು ಆರೋಪಿಗೆ 20 ವರ್ಷಗಳ ಕಠಿಣ ಶಿಕ್ಷೆ ಮತ್ತು 1.75 ಲಕ್ಷ ದಂಡ ಹಾಗೂ ಎಸ್‍ಸಿ/ಎಸ್‍ಟಿ ಕಾಯ್ದೆ ಅಡಿಯಲ್ಲಿ 1 ವರ್ಷ ಸಾಧಾ ಶಿಕ್ಷೆ ವಿಧಿಸಿದ್ದಾರೆ.
ಅಲ್ಲದೆ ಕಾನೂನು ಪ್ರಾಧಿಕಾರದ ವತಿಯಿಂದ ಬಾದಿತಳಿಗೆ 4 ಲಕ್ಷ ರೂ. ಪರಿಹಾರ ನೀಡಬೇಕೆಂದು ಆದೇಶಿಸಿದ್ದಾರೆ.
ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕರಾದ ಶಾಂತವೀರ ಬಿ.ತುಪ್ಪದ ವಾದ ಮಂಡಿಸಿದ್ದರು.

























