Home ಜಿಲ್ಲೆ ರೇಷನ್ ಅಕ್ಕಿ ಮಾರಾಟ ಮಾಡಿದರೆ ಪಡಿತರ ಚೀಟಿ ರದ್ದು : ಉಪ್ಪೆ

ರೇಷನ್ ಅಕ್ಕಿ ಮಾರಾಟ ಮಾಡಿದರೆ ಪಡಿತರ ಚೀಟಿ ರದ್ದು : ಉಪ್ಪೆ

ಔರಾದ್ : ಅನ್ನಭಾಗ್ಯ ಯೋಜನೆಯಡಿ ಸರ್ಕಾರ ಬಡ ಕುಟುಂಬಗಳಿಗೆ ಉಚಿತವಾಗಿ ವಿತರಿಸುತ್ತಿರುವ ಪಡಿತರ ಅಕ್ಕಿಯನ್ನು ಫಲಾನುಭವಿಗಳು ಮಾರಾಟ ಮಾಡದಂತೆ ಗ್ರಾಮಮಟ್ಟದಲ್ಲಿ ಜಾಗೃತಿ ಮೂಡಿಸಬೇಕು ಎಂದು
ಪAಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ತಾಲೂಕು ಅಧ್ಯಕ್ಷ ಚನ್ನಪ್ಪ ಉಪ್ಪೆ ಅವರು ಹೇಳಿದರು.
ಪಟ್ಟಣದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಹಾಗೂ ಪ್ರಗತಿ ಪರಿಶೀಲನಾ ಸಭೆಯನ್ನುದ್ದೆಶಿಸಿ ಮಾತನಾಡಿದ ಅವರು,
ಅನ್ನಭಾಗ್ಯ ಫಲಾನುಭವಿಗಳು ಪಡಿತರ ಅಕ್ಕಿಯನ್ನು ಮಾರಾಟ ಮಾಡುತ್ತಿರುವುದು ಕಂಡುಬAದಲ್ಲಿ ಅಂತಹವರ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಂಡು ಪಡಿತರ ಚೀಟಿ ರದ್ದುಪಡಿಸಲು ಕ್ರಮ ವಹಿಸಲಾಗುತ್ತದೆ, ರೇಷನ್ ಅಕ್ಕಿ ಮಾರಾಟ ಆಗದಿರುವ ಕುರಿತು ಗ್ರಾಮಗಳಲ್ಲಿ ಡಂಗೂರ ಸಾರುವ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು. ಸರ್ಕಾರದ ಯೋಜನೆಗಳ ಸದುಪಯೋಗ ಪಡೆಯುವಂತೆ ಫಲಾನುಭವಿಗಳಿಗೆ ತಿಳಿವಳಿಕೆ ನೀಡಬೇಕು ಎಂದು ಅನ್ನಭಾಗ್ಯ ಯೋಜನೆಯ ಶಿರಸ್ತೆದಾರ ಅವರಿಗೆ ಸೂಚಿಸಿದರು.
ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಕಿರಣ ಪಾಟೀಲ ಅವರು ಮಾತನಾಡಿ, ಶಾಲಾ ವಿದ್ಯಾರ್ಥಿಗಳಿಗೆ ಬಸ್ ಸೌಲಭ್ಯದಲ್ಲಿ ಯಾವುದೇ ತೊಂದರೆಯಾಗದAತೆ ಸಾರಿಗೆ ಇಲಾಖೆ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು. ವಿದ್ಯಾರ್ಥಿಗಳ ಅನುಕೂಲಕ್ಕೆ ಆದ್ಯತೆ ನೀಡಿ ಬಸ್ ಸಂಚಾರ ವ್ಯವಸ್ಥೆಯನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಸೂಚಿಸಿದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕ (ಗ್ರಾ.ಉ) ಶಿವಕುಮಾರ ಘಾಟೆ, ಪಂಚ ಗ್ಯಾರಂಟಿ ಯೋಜನೆಗಳ ಸಮಿತಿ ಸದಸ್ಯರಾದ ಶಿವಕುಮಾರ ಪಾಟೀಲ್, ಡಿ.ಕೆ. ಚಂದು, ಸಲ್ಲಾವುದ್ದಿನ್ ಜಂಬಗಿ, ಸಂಜುಕುಮಾರ ಉಜನಿ, ಚೆನ್ನಬಸಪ್ಪ ಕೌಠಾ, ರಾಜಕುಮಾರ ಕಂದಗೂಳ ಸೇರಿದಂತೆ ಸಿಡಿಪಿಒ, ಕೆಇಬಿ, ಆಹಾರ ಇಲಾಖೆ, ಯುವನಿಧಿ ಹಾಗೂ ಸಾರಿಗೆ ಇಲಾಖೆಯ ಅಧಿಕಾರಿಗಳು ಮತ್ತು ತಾಲೂಕು ಪಂಚಾಯತ್ ಸಿಬ್ಬಂದಿ ಉಪಸ್ಥಿತರಿದ್ದರು.