ರಾವೂರ: ಎರಡು ಕೋಮಿನ ನಡುವೆ ಗಲಾಟೆ

ಕಲಬುರಗಿ,ಫೆ.21-ಛತ್ರಪತಿ ಶಿವಾಜಿ ಮಹಾರಾಜ ಜಯಂತಿ ಮೆರವಣಿಗೆ ಸಂದರ್ಭದಲ್ಲಿ ಕಲಬುರಗಿಯಲ್ಲಿ ಎರಡು ಕೋಮಿನ ಜನರ ನಡುವೆ ಗಲಾಟೆ ನಡೆದಿದೆ.
ಚಿತ್ತಾಪೂರ ತಾಲೂಕಿನ ರಾವೂರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ನಿನ್ನೆ ಸಂಜೆ ಛತ್ರಪತಿ ಶಿವಾಜಿ ಜಯಂತಿ ಹಿನ್ನೆಲೆ ಯುವಕರಿಂದ ಶಿವಾಜಿ ಭಾವಚಿತ್ರ ಮೆರವಣಿಗೆ ಮಾಡಲಾಗಿತ್ತು.
ಈ ವೇಳೆ ನಡೆದ ಗಲಾಟೆಯಲ್ಲಿ ಮೂರು ನಾಲ್ಕು ಜನರಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವಾಡಿ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.