Home ಜಿಲ್ಲೆ ಬೆಂಗಳೂರು ರಾಯಣ್ಣ ಪುತ್ಥಳಿಗೆ ನಾಳೆ ಮಾಲಾರ್ಪಣೆ

ರಾಯಣ್ಣ ಪುತ್ಥಳಿಗೆ ನಾಳೆ ಮಾಲಾರ್ಪಣೆ

ಬೆಂಗಳೂರು, ಆ. ೧೪- ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಷ್ಠಾನ ವತಿಯಿಂದ ಕರ್ನಾಟಕದ ಪ್ರಥಮ ಸ್ವಾತಂತ್ರ್ಯ ಹೋರಾಟಗಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ೨೨೯ನೇ ಜಯಂತ್ಯೋತ್ಸವದ ಪ್ರಯುಕ್ತ ನಾಳೆ ಬೆಳಿಗ್ಗೆ ೧೧ ಗಂಟೆಗೆ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಎದುರು ಇರುವ ರಾಯಣ್ಣನವರ ಪುತ್ಥಳಿಗೆ ಮಾಲಾರ್ಪಣೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಸಚಿವ ಕೃಷ್ಣಬೈರೇಗೌಡ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ.ರೇವಣ್ಣ ಅವರುಗಳು ರಾಯಣ್ಣನವರ ಪುತ್ಥಳಿಗೆ ಮಾಲಾರ್ಪಣೆ ಮಾಡಲಿದ್ದು, ಜಿಬಿಎ ಮುಖ್ಯ ಆಯುಕ್ತ ಮಹೇಶ್ವರರಾವ್ ಎಂ. ಅವರು ಉಪಸ್ಥಿತರಿರಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಜಿ ಸಚಿವ, ಶಾಸಕ ದಿನೇಶ್ ಗುಂಡೂರಾವ್ ರವರು ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ, ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ, ಮಾಜಿ ಮೇಯರ್ ಜೆ. ಹುಚ್ಚಪ್ಪ, ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ಅಧ್ಯಕ್ಷ ಎಂ. ಶಿವರಾಜು, ಬೆಂ. ಕೇಂದ್ರ ನಗರ ಪಾಲಿಕೆ ಆಯುಕ್ತ ಜಗದೀಶ್ ಜಿ., ಅಪರ ಆಯುಕ್ತ ಹೇಮಂತ್ ಶರಣ್ ಅವರುಗಳು ಆಗಮಿಸಲಿದ್ದಾರೆ.

ಈ ಕಾರ್ಯಕ್ರಮಕ್ಕೆ ಸಂಗೊಳ್ಳಿ ರಾಯಣ್ಣನವರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಪ್ರತಿಷ್ಠಾನದ ಗೌರವಾಧ್ಯಕ್ಷ ಜಿ.ಎಲ್. ನಾರಾಯಣಸ್ವಾಮಿ, ಅಧ್ಯಕ್ಷ ಸಂಗೊಳ್ಳಿ ಕೃಷ್ಣಮೂರ್ತಿ, ಉಪಾಧ್ಯಕ್ಷ ಆರ್.ಜಿ. ಶಂಕರ್ ಮತ್ತು ಪದಾಧಿಕಾರಿಗಳು ಪ್ರಕಟಣೆಯಲ್ಲಿ ಕೋರಿದ್ದಾರೆ.