Home ಜಿಲ್ಲೆ ಬೆಂಗಳೂರು ಗೃಹಲಕ್ಷ್ಮೀ, ಗೃಹಜ್ಯೋತಿ ಯೋಜನೆಗೆ ಮರು ಅರ್ಜಿ ಸಲ್ಲಿಕೆ ಮಾಹಿತಿ

ಗೃಹಲಕ್ಷ್ಮೀ, ಗೃಹಜ್ಯೋತಿ ಯೋಜನೆಗೆ ಮರು ಅರ್ಜಿ ಸಲ್ಲಿಕೆ ಮಾಹಿತಿ

ಬೆಂಗಳೂರು,ಜೂ. ೧೪- ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಗೃಹಲಕ್ಷ್ಮಿ ಹಾಗೂ ಗೃಹಜ್ಯೋತಿ ಯೋಜನೆಗಳಿಗೆ ಸೇವಾ ಸಿಂಧು ಮೂಲಕ ಮರು ಅರ್ಜಿ ಸಲ್ಲಿಸಬಹುದಾಗಿದೆ.


ಆಧಾರ ಸಂಖ್ಯೆ ಹಾಗೂ ಮೊಬೈಲ್ ಸಂಖ್ಯೆಯ ನೆರವಿನಿಂದ ನೋಂದಣಿ ಮಾಡಬಹುದು. ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಹಾಗೂ ನಾಡ ಕಚೇರಿಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.


ಆಧಾರ್ ಕಾರ್ಡ್, ಆಧಾರ್ ಜೋಡಣೆಯಾಗಿರುವ ಬ್ಯಾಂಕ್ ಪಾಸ್‌ಬುಕ್, ರೇಷನ್ ಕಾರ್ಡ್ (ಪಡಿತರ ಚೀಟಿ) ಸರ್ಕಾರದಿಂದ ಅಧಿಕೃತ ಮಾರ್ಗಸೂಚಿ ಪ್ರಕಟವಾದ ಬಳಿಕ ಮರು ನೋಂದಣಿ ಪ್ರಕ್ರಿಯೆ, ಸ್ಮಾರ್ಟ್ ಕಾರ್ಡ್ ವಿತರಣೆ ಹಾಗೂ ಪರಿಷ್ಕೃತ ನಿಯಮಗಳ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ.


ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮೀ ಹಾಗೂ ಗೃಹಜ್ಯೋತಿ ಯೋಜನೆಗಳನ್ನು ಮತ್ತೊಮ್ಮೆ ಪರಿಷ್ಕರಿಸಲು ಸರ್ಕಾರ ಮುಂದಾಗಿದ್ದು, ಫಲಾನುಭವಿಗಳು ಹೊಸದಾಗಿ ಅರ್ಜಿ ಸಲ್ಲಿಸುವ ವ್ಯವಸ್ಥೆ ಜಾರಿಗೆ ಬರುವ ಸಾಧ್ಯತೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಿನ್ನೆ ತಿಳಿಸಿದ್ದರು.


ಯೋಜನೆಗಳನ್ನು ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಅವರು, ಅರ್ಹ ಫಲಾನುಭವಿಗಳಿಗೆ ಮಾತ್ರ ಸೌಲಭ್ಯ ತಲುಪುವಂತೆ ಮಾಡಲು ಮರು ನೋಂದಣಿ ಪ್ರಕ್ರಿಯೆ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದರು.