
ದೆಹಲಿ,ಜು.೨೨: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷಗಳು ನಡೆಸುತ್ತಿರುವ ಹೋರಾಟದ ಬೆನ್ನಲ್ಲೇ ನೀಟ್ ವಿಷಯದ ಕುರಿತು ಸಮಗ್ರ ಚರ್ಚೆ ನಡೆಸಲು ಸರ್ಕಾರ ಸಂಪೂರ್ಣವಾಗಿ ಸಿದ್ಧವಾಗಿದೆ ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.
ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು,ನೀಟ್ ವಿಚಾರದಲ್ಲಿ ಪ್ರತಿಪಕ್ಷಗಳು ರಚನಾತ್ಮಕ ಚರ್ಚೆಯಲ್ಲಿ ಭಾಗವಹಿಸುವಂತೆ ಒತ್ತಾಯಿಸಿದರು.
ಪ್ರಶ್ನೆ ಪತ್ರಿಕೆ ಸೋರಿಕೆಯ ವರದಿಗಳು ಬಂದ ತಕ್ಷಣ ಸರ್ಕಾರ ತಕ್ಷಣ ಕ್ರಮ ಕೈಗೊಂಡಿದೆ.ಆದರೆ ಪ್ರಧಾನ್ ರಾಜೀನಾಮೆಗೆ ವಿರೋಧ ಪಕ್ಷದ ಬೇಡಿಕೆಗಳು ರಾಜಕೀಯ ಪ್ರೇರಿತವಾಗಿವೆ ಎಂದು ಹೇಳಿದರು.
ಸಂಸತ್ ಹೊರಗೆ ವಿಪಕ್ಷ ಪ್ರತಿಭಟನೆ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿಷಯಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿರುವ ವಿರೋಧ ಪಕ್ಷಗಳ ನಾಯಕರು ಇಂದು ಸಂಸತ್ತಿನ ಹೊರಗೆ ಪ್ರತಿಭಟನೆ ನಡೆಸಿದರು.
ಪ್ರತಿಭಟನೆ ವೇಳೆ ಪ್ರತಿಪಕ್ಷದ ಸಂಸದರು ವಿದ್ಯಾರ್ಥಿಗಳ ಮೇಲಿನ ಪೊಲೀಸರ ದೌರ್ಜನ್ಯ ಖಂಡಿಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.ಅಲ್ಲದೆ,ಗೃಹ ಸಚಿವ ಅಮಿತ್ ಶಾ ಮತ್ತು ಶಿಕ್ಷಣ ಸಚಿವ ಧಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿದರು.
ಈ ವೇಳೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಕಾಂಗ್ರೆಸ್, ಎಸ್‌ಪಿ, ಎಡ ಪಕ್ಷಗಳು, ಆರ್‌ಜೆಡಿ, ಟಿಎಂಸಿ, ಜೆಎಂಎಂ ಮತ್ತು ಇತರ ಪಕ್ಷಗಳ ಸಂಸದರು ಹಾಜರಿದ್ದರು,

































