Home ಜಿಲ್ಲೆ ಬೆಂಗಳೂರು ವ್ಯಕ್ತಿಯನ್ನು ಗುರುತಿಸಿದರೆ ಸಮಾಜವನ್ನೇ ಗುರುತಿಸಿದಂತೆ

ವ್ಯಕ್ತಿಯನ್ನು ಗುರುತಿಸಿದರೆ ಸಮಾಜವನ್ನೇ ಗುರುತಿಸಿದಂತೆ

ಬೆಂಗಳುರು,ಜೂ.೧೩-ಸಾಂಸ್ಕೃತಿಕ ಜಗತ್ತಿನಲ್ಲಿ ಯಾವುದೇ ವ್ಯಕ್ತಿಯನ್ನು ಗುರುತಿಸಿ ಸನ್ಮಾನಿಸಿದರೆ, ಅದು ಅಂತಹ ವ್ಯಕ್ತಿ ಸೇವೆ ಸಲ್ಲಿಸಿರುವ ಸಂಸ್ಥೆಯನ್ನು, ವ್ಯಕ್ತಿ ಪ್ರತಿನಿಧಿಸುತ್ತಿರುವ ಇಡೀ ಸಂಘಟನೆಯನ್ನು ಅಥವಾ ಇಡೀ ಸಮಾಜವನ್ನೇ ಗುರುತಿಸಿದಂತೆ ಎಂದು ಬಂಜಾರ ಸಂಸ್ಕೃತಿ ಹಾಗೂ ಭಾಷಾ ಅಕಾಡೆಮಿ ಅಧ್ಯಕ್ಷ ಡಾ. ಎ ಆರ್ ಗೋವಿಂದಸ್ವಾಮಿ ಅಭಿಪ್ರಾಯಪಟ್ಟರು. ಅವರು ಇಂದು ಆನಂದರಾವ್ ವೃತ್ತದ ಬಳಿಯಿರುವ ಕವಿಮಂ ಲೆಕ್ಕಾಧಿಕಾರಿಗಳ ಸಂಘದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.


ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಕವಿಮಂ ಪಿಂಚಣಿದಾರರ ಸಂಘದ ಅಧ್ಯಕ್ಷ, ನಿವೃತ್ತ ಉಪ ಲೆಕ್ಕನಿಯಂತ್ರಣಾಧಿಕಾರಿ ಶ್ರೀ ಬಿ ಪಿ ಕುಮಾರಸ್ವಾಮಿ ಅವರು ಮಾತನಾಡುತ್ತಾ ಡಾಕ್ಟರ್ ಗೋವಿಂದಸ್ವಾಮಿ ಅವರು ರಂಗಪ್ರಪಂಚದಲ್ಲಿ ಅನೇಕ ಸಾಧನೆಗಳನ್ನು ಮಾಡಿ, ಡಾಕ್ಟರೇಟ್ ಪದವಿಯನ್ನು ಪಡೆದು ಉತ್ತಮ ಸೇವೆ ಸಲ್ಲಿಸುತ್ತಿರುವುದನ್ನು ಶ್ಲಾಘಿಸಿದರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕವಿಮಂ ಲೆಕ್ಕಾಧಿಕಾರಿಗಳ ಸಂಘದ ಅಧ್ಯಕ್ಷ ಶ್ರೀ ಎಸ್ ಗಿರೀಶ್ ಅವರು ಮಾತನಾಡಿ, ಡಾಕ್ಟರ್ ಎ ಆರ್ ಗೋವಿಂದಸ್ವಾಮಿ ಅವರನ್ನು ಸನ್ಮಾನಿಸಿರುವುದು ತುಂಬಾ ಸಂತೋಷ ;ಅವರ ಸೇವೆ, ಸಾಂಸ್ಕೃತಿಕ ಚಟುವಟಿಕೆಗಳು ಸದಾ ಮುಂದುವರಿಯುತ್ತಿರಲಿ ಎಂದು ಆಶಿಸಿದರು.