
ಬೆಂಗಳೂರು,ಏ.9-ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 5,46,698 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕರ್ನಾಟಕದಲ್ಲಿ ಮೊದಲ ಬಾರಿಗೆ ಶೇ.86.48ರಷ್ಟು ದಾಖಲೆಯ ಫಲಿತಾಂಶ ಬಂದಿದೆ.
ನಗರದಲ್ಲಿ ಗುರುವಾರ ಸಂಜೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 6,32,200 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 5,46,698 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಈ ಪೈಕಿ 2,32,928 ( 83.65%) ಬಾಲಕರು, 3,13,770 (88.70%) ಬಾಲಕಿಯರು ಉತ್ತೀರ್ಣರಾಗಿದ್ದು, ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ ಎಂದರು.
ದಾಖಲೆಯ ಫಲಿತಾಂಶ ಪ್ರಕಟವಾದ ಇದು ಐತಿಹಾಸಿಕ ದಿನವಾಗಿದೆ, ಮೊದಲು ಮಕ್ಕಳಿಗೆ ಧನ್ಯವಾದ ಹೇಳುತ್ತೇನೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹರ್ಷ ವ್ಯಕ್ತಪಡಿಸಿದರು. ಕಲಾ ವಿಭಾಗದಲ್ಲಿ 98,310 (72.86%) ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 1,82,317(88.04%) ವಿದ್ಯಾರ್ಥಿಗಳು ಹಾಗೂ ವಿಜ್ಞಾನ ವಿಭಾಗದಲ್ಲಿ 2,66,071( 86.48%) ಉತ್ತೀರ್ಣರಾಗಿದ್ದಾರೆ. ಈ ಪೈಕಿ ನಗರ ವಿಭಾಗದಲ್ಲಿ 3,71,853 (85.95%) ಮಕ್ಕಳು, ಗ್ರಾಮೀಣ ವಿಭಾಗದ 1,74,845 (87.62%) ಮಕ್ಕಳು ಉತ್ತೀರ್ಣರಾಗಿದ್ದಾರೆ.
ಉನ್ನತ ಶ್ರೇಣಿಯಲ್ಲಿ 1,70,529 ಮಕ್ಕಳು, ಪ್ರಥಮ ದರ್ಜೆಯಲ್ಲಿ 2,95,385 ಮಕ್ಕಳು, ದ್ವೀತಿಯ ದರ್ಜೆಯಲ್ಲಿ 63,957 ಮಕ್ಕಳು ಉತ್ತೀರ್ಣರಾಗಿದ್ದು, 16,827 ಮಕ್ಕಳು ಜಸ್ಟ್ ಪಾಸ್ ಆಗಿದ್ದಾರೆ ಎಂದು ಮಾಹಿತಿ ನೀಡಿದರು.
ಇನ್ನೂ 5,577 ವಿದ್ಯಾರ್ಥಿಗಳು 35% ನಿಂದ 33% ಪಾಸಿಂಗ್ ಅಂಕದಿಂದ ಪಾಸ್ ಆಗಿದ್ದಾರೆ. ಮಕ್ಕಳಿಗೆ ಫಲಿತಾಂಶ ಮೊದಲು ಕೊಡಬೇಕು ಎಂದು ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟ ಮಾಡಿದ್ದೇವೆ. ಅಂಕಪಟ್ಟಿ ಕೂಡ ಇಂದೇ ಲಭ್ಯವಾಗಿದೆ. ಡಿಜಿ ಲಾಕರ್‌ನಲ್ಲೂ ಅಂಕಪಟ್ಟಿ ಸಿಗಲಿದೆ.
ಈ ವರ್ಷ ಶೇ.86ರಷ್ಟು ಮಕ್ಕಳು ಉತ್ತೀರ್ಣರಾಗಿದ್ದಾರೆ. ಅಂದರೆ 7,10,363 ವಿದ್ಯಾರ್ಥಿಗಳ ಪೈಕಿ 6.10 ಲಕ್ಷ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಕಳೆದ ವರ್ಷ ಶೇ.73.45ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರು. ಇದರೊಂದಿಗೆ ಈ ಬಾರಿ ಪಿಯುಸಿ ಫಲಿತಾಂಶದಲ್ಲಿ ಭಾರೀ ಸುಧಾರಣೆ ಕಂಡು ಬಂದಿದೆ.
590ಕ್ಕಿಂತ ಅಧಿಕ ಅಂಕ:
ವಾಣಿಜ್ಯ ವಿಭಾಗದಲ್ಲಿ 9 ವಿದ್ಯಾರ್ಥಿಗಳು 590ಕ್ಕಿಂತ ಅಧಿಕ ಅಂಕ ಗಳಿಸಿದ್ದಾರೆ. ಒಂದೇ ಕಾಲೇಜಿನ 9 ವಿದ್ಯಾರ್ಥಿಗಳು ವಾಣಿಜ್ಯ ವಿಭಾಗದಲ್ಲಿ ಈ ಸಾಧನೆ ಮಾಡಿದ್ದಾರೆ.
ರಾಜಾಜಿನಗರದ ಎಎಸ್ ಸಿ ಕಾಲೇಜಿನ 9 ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ.
ಈ ಬಾರಿಯ ಪಿಯುಸಿ ಫಲಿತಾಂಶದಲ್ಲಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳು ಪ್ರಥಮ ಸ್ಥಾನ ಪಡೆದಿವೆ. ಈ ಬಾರಿಯೂ ಈ ಎರಡು ಜಿಲ್ಲೆಗಳು ಅತ್ಯಧಿಕ ಪಾಸ್ ಪ್ರಮಾಣ ದಾಖಲಿಸಿವೆ.
ಶೇಕಡಾ 96.39 ಫಲಿತಾಂಶ ಪಡೆದು ಉಡುಪಿ ಜಿಲ್ಲೆ ರಾಜ್ಯಕ್ಕೆ ಮತ್ತೆ ಪ್ರಥಮ ಸ್ಥಾನ ಪಡೆದುಕೊಂಡರೆ, ಉತ್ತರ ಕನ್ನಡ ಜಿಲ್ಲೆ ಶೇಕಡಾ 96.35 ಫಲಿತಾಂಶದೊಂದಿಗೆ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದಿದೆ.
ಬೆಂಗಳೂರು ನಗರ ಮತ್ತು ಮೈಸೂರು ಜಿಲ್ಲೆಗಳೂ ಉತ್ತಮ ಸಾಧನೆ ತೋರಿದ್ದು, ಹಾಸನ ಹಾಗೂ ಯಾದಗಿರಿ ಜಿಲ್ಲೆಗಳು ಶೇಕಡಾ 71.21 ಫಲಿತಾಂಶದೊಂದಿಗೆ ರಾಜ್ಯಕ್ಕೆ ಕೊನೆಯ ಸ್ಥಾನದಲ್ಲಿವೆ.
ಟಾಪರ್ ಗಳು:
ವಾಣಿಜ್ಯ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿಶಾ ಅವರು 600 ಅಂಕಗಳಿಗೆ 600 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.
ಇನ್ನು ಕಲಾ ವಿಭಾಗದಲ್ಲಿ ಬಳ್ಳಾರಿ ಜಿಲ್ಲೆಯ ಕೊಟ್ಟೂರಿನ ಇಂದು ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರಾದ ಅರ್ಚನಾ ಮತ್ತು ಸಂಗೀತ ಅವರು 600 ಅಂಕಗಳಿಗೆ 598 ಪಡೆದು ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಶಮನ್ಯು ಎಸ್. ಶೆಟ್ಟಿ ಅವರು 600 ಅಂಕಗಳಿಗೆ 598 ಅಂಕ ಪಡೆದು ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿದ್ದಾರೆ.
ಫಲಿತಾಂಶ ಲಭ್ಯ:
ಇದೇ ಮೊದಲ ಬಾರಿಗೆ ವಿದ್ಯಾರ್ಥಿಗಳ ಫಲಿತಾಂಶದ ಅಂಕಪಟ್ಟಿಯು ಡಿಜಿಲಾಕರ್ ಮೂಲಕ ಲಭ್ಯವಾಗಲಿದೆ. ಒಂದು ವೇಳೆ ವೆಬ್‌ಸೈಟ್‌ನಲ್ಲಿ ರಿಸಲ್ಟ್ ನೋಡುವಾಗ ಸರ್ವರ್ ಸಮಸ್ಯೆ ಎದುರಾದರೆ ಡಿಜಿಲಾಕರ್ ಮೂಲಕವೇ ಮಾರ್ಕ್ಸ್ ಕಾರ್ಡ್ ಪಡೆದುಕೊಳ್ಳಬಹುದು.
ದಿಶಾ ವಾಣಿಜ್ಯ ಪ್ರಥಮ
ಮೂಡುಬಿದಿರೆಯ ಆಳ್ವಾಸ್ ಪಿಯು ಕಾಲೇಜು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ರಾಜ್ಯಮಟ್ಟದಲ್ಲಿ ಅಭೂತಪೂರ್ವ ಯಶಸ್ಸು ಸಾಧಿಸಿದೆ.
ವಾಣಿಜ್ಯ ವಿಭಾಗದಲ್ಲಿ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿಶಾ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆಯುವ ಮೂಲಕ ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ಬರೆದಿದ್ದಾರೆ.
ಮೂಡುಬಿದಿರೆಯ ದಿಶಾ. ವಾಣಿಜ್ಯ ವಿಭಾಗದ ಆರೂ ವಿಷಯಗಳಲ್ಲಿ 600 (ಶೇ.100) ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.
ಕಲಾ ವಿಭಾಗದಲ್ಲಿ ಬಳ್ಳಾರಿ ಜಿಲ್ಲೆಯ ಕೊಟ್ಟೂರಿನ ಇಂದು ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರಾದ ಅರ್ಚನಾ ಮತ್ತು ಸಂಗೀತ ಅವರು 600 ಅಂಕಗಳಿಗೆ 598 ಪಡೆದು ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಶಮನ್ಯು ಎಸ್. ಶೆಟ್ಟಿ ಅವರು 600 ಅಂಕಗಳಿಗೆ 598 ಅಂಕ ಪಡೆದು ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿದ್ದಾರೆ
ಬಳ್ಳಾರಿ ಸೆಂಟ್ರಲ್ ಜೈಲಿನ
ಕೈದಿಗೆ 600ಕ್ಕೆ 481
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಬಳ್ಳಾರಿ ಸೆಂಟ್ರಲ್ ಜೈಲಿನ ಶಿಕ್ಷಾ ಬಂಧಿ ಫಸ್ಟ್ ಕ್ಲಾಸ್‌ನಲ್ಲಿ ಪಾಸಾಗಿದ್ದಾನೆ. 600ಕ್ಕೆ 481 ಅಂಕಗಳನ್ನು ಪಡೆದಿದ್ದಾನೆ.
ಶಿಕ್ಷಾಬಂಧಿ ಅಶೋಕ್ ಕುಮಾರ್ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಫಸ್ಟ್ ಕ್ಲಾಸ್ ಬಂದಿದ್ದಾನೆ. ಈತ ಕಲಾ ವಿಭಾಗದಲ್ಲಿ ಪರೀಕ್ಷೆ ಬರೆದಿದ್ದ. 600ಕ್ಕೆ 481 ಅಂಕ ಪಡೆಯುವ ಮೂಲಕ ಶೇ.81% ಫಲಿತಾಂಶದ ಸಾಧನೆ ಮಾಡಿದ್ದಾನೆ.
ಕನ್ನಡದಲ್ಲಿ 82, ಇಂಗ್ಲಿಷ್ 69, ಇತಿಹಾಸ 94, ಅರ್ತಶಾಸ್ತ್ರ 84, ಸಮಾಜಶಾಸ್ತ್ರ 77, ರಾಜ್ಯಶಾಸ್ತ್ರ75 ಅಂಕ ಗಳಿಸಿದ್ದಾನೆ. ಶಿಕ್ಷಾಬಂಧಿ ಅಶೋಕ್ ಕುಮಾರ್ ಜೈಲಿನ ಪ್ರತ್ಯೇಕ ಸೆಲ್‌ನಲ್ಲಿಯೇ ಅಭ್ಯಾಸ ಮಾಡಿದ್ದ.
ಯಾವ ಜಿಲ್ಲೆ ಎಷ್ಟನೇ ಸ್ಥಾನ
ಕಳೆದ ಬಾರಿ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಉಡುಪಿ ಪ್ರಥಮ ಸ್ಥಾನ ಪಡೆದುಕೊಂಡಿದ್ದರೆ, ಯಾದಗಿರಿ ಕೊನೆ ಸ್ಥಾನದಲ್ಲಿತ್ತು.
ಈ ಬಾರಿಯೂ ಸಹ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಉಡುಪಿ ಪ್ರಥಮ, ಯಾದಗಿರಿ ಕೊನೇ ಸ್ಥಾನದಲ್ಲಿದೆ. ಶೇಕಡಾ 9639 ಫಲಿತಾಂಶ ಪಡೆದು ಉಡುಪಿ ಜಿಲ್ಲೆ ರಾಜ್ಯಕ್ಕೆ ಮತ್ತೆ ಪ್ರಥಮ ಸ್ಥಾನ ಪಡೆದುಕೊಂಡರೆ, ಉತ್ತರ ಕನ್ನಡ ಜಿಲ್ಲೆ ಶೇಕಡಾ 96.35 ಫಲಿತಾಂಶದ ಮೂಲಕ ರಾಜ್ಯದಲ್ಲೇ ಎರಡನೇ ಸ್ಥಾನ ಪಡೆದಿದೆ.
ಇನ್ನು ಹಾಸನ ಯಾದಗಿರಿ ಜಿಲ್ಲೆ ಶೇಕಡಾ 71.21 ಫಲಿತಾಂಶದ ಮೂಲಕ ರಾಜ್ಯಕ್ಕೆ ಕೊನೆಯ ಸ್ಥಾನದಲ್ಲಿದೆ.
ಜಿಲ್ಲಾವಾರು ಫಲಿತಾಂಶ
ಉಡುಪಿ – 96.39%
ದಕ್ಷಿಣ ಕನ್ನಡ – 96.35%
ಕೊಡಗು – 92.34%
ವಿಜಯಪುರ – 92%
ಉತ್ತರ ಕನ್ನಡ – 91.78%
ಬೆಂಗಳೂರು ಗ್ರಾಮಾಂತರ – 91.00%
ಚಿಕ್ಕಮಗಳೂರು – 90.80%
ಬೆಂಗಳೂರು ದಕ್ಷಿಣ – 90.55%
ಚಿಕ್ಕಬಳ್ಳಾಪುರ – 90.24%
ಬೆಂಗಳೂರು ಉತ್ತರ – 90.05%
ಹಾಸನ – 89.71%
ಮಂಡ್ಯ – 88.85%
ರಾಮನಗರ – 87.90%
ಕೋಲಾರ – 87.38%
ಶಿವಮೊಗ್ಗ – 87.62%
ತುಮಕೂರು – 86.89%
ಕೊಪ್ಪಳ – 86.80%
ಚಾಮರಾಜನಗರ – 84.68%
ಮೈಸೂರು – 84.80%
ಬೀದರ್ – 84.61%
ಬಾಗಲಕೋಟೆ – 84.12%
ಹಾವೇರಿ – 84.11%
ಧಾರವಾಡ – 83.31%
ಚಿಕ್ಕೋಡಿ – 83.10%
ದಾವಣಗೆರೆ – 81.99%
ಬೆಳಗಾವಿ – 80.32%
ಚಿತ್ರದುರ್ಗ – 79.12%
ಬಳ್ಳಾರಿ – 78.69%
ಕಲಬುರಗಿ – 76.97%
ಗದಗ – 76.65%
ರಾಯಚೂರು – 74.09%
ಯಾದಗಿರಿ – 71.21%
























