
ಬೀದರ: ವಿದ್ಯಾರ್ಥಿಗಳು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿದರೆ ಒಬ್ಬರ ಜೀವ ಉಳಿಸಿದಂತಾಗುತ್ತದೆ. ರಕ್ತದಾನ ಮಹಾದಾನವೆಂದು ಜಾಗೃತಿ ಮೂಡಿಸಬೇಕು. ಸಾರ್ವಜನಿಕ ಆರೋಗ್ಯಕ್ಕಾಗಿ ನಿಯಮಿತ ರಕ್ತದಾನದ ಅಗತ್ಯವಿದೆ ಎಂದು ಕರ್ನಾಟಕ ಕಾಲೇಜಿನ ಪ್ರಾಚಾರ್ಯರಾದ ಸೋಮನಾಥ ಬಿರಾದಾರ ತಿಳಿಸಿದರು.
ನಗರದ ಕರ್ನಾಟಕ ಕಲಾ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ರೋಟರಿ ಕ್ಲಬ್ ಆಫ್ ಬೀದರ್ ಫೆÇೀರ್ಟ್, ಕರ್ನಾಟಕ ಕಲಾ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ, ಹಾಗೂ ಬೀದರ್ ಇನ್‍ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಬ್ರಿಮ್ಸ್), ಕಾಲೇಜಿನ ಎನ್‍ಎಸ್‍ಎಸ್ ಘಟಕ, ಎನ್‍ಸಿಸಿ ಘಟಕ ಇವರ ಸಹಯೋಗದಲ್ಲಿ ಆಯೋಜಿಸಿದ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.
ರಕ್ತದಾನದಿಂದ ಶರೀರದಲ್ಲಿ ಇನ್ನಷ್ಟು ರಕ್ತ ಉತ್ಪತ್ತಿಯಾಗುತ್ತದೆ. ಇದರಿಂದ ಹೃದಯರೋಗ ಬರುವುದಿಲ್ಲ. ಶರೀರದ ಸಮತೋಲನೆಯಿಂದ ವ್ಯಕ್ತಿ ಆರೋಗ್ಯವಂತನಾಗಿರುತ್ತಾನೆ. ಆದ್ದರಿಂದ ರಕ್ತದಾನ ಮಾಡಬೇಕೆಂದು ಸಲಹೆ ನೀಡಿದರು. ಜೊತೆಗೆ ಈ ಶಿಬಿರದಲ್ಲಿ ಒಟ್ಟು 34 ಯೂನಿಟ್ ರಕ್ತವನ್ನು ಯಶಸ್ವಿಯಾಗಿ ಸಂಗ್ರಹಿಸಲಾಯಿತು. ರಕ್ತದಾನ ಮಾಡಿ ಮಾನವೀಯತೆ ಮೆರೆದ ದಾನಿಗಳಿಗೆ ಪ್ರಶಂಸೆ ವ್ಯಕ್ತಪಡಿಸಿದರು.
ಈ ಕಾರ್ಯಕ್ರಮದಲ್ಲಿ ಕರ್ನಾಟಕ ಕಲಾ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು, ರೋಟರಿ ಕ್ಲಬ್ ಆಫ್ ಬೀದರ್ ಫೆÇೀರ್ಟ್ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಸಕ್ರಿಯ ಸದಸ್ಯರು ಭಾಗವಹಿಸಿದ್ದರು. ಆಯೋಜಕರು ಜೀವ ಉಳಿಸುವ ಮಹತ್ವದ ಕಾರ್ಯದಲ್ಲಿ ಪಾಲ್ಗೊಂಡ ಸ್ವಯಂಪ್ರೇರಿತ ರಕ್ತದಾನಿಗಳನ್ನು ಪ್ರಶಂಸಿಸಿದರು. ಈ ಶಿಬಿರದಲ್ಲಿ ಎನ್‍ಎಸ್‍ಎಸ್ ಅಧಿಕಾರಿಗಳಾದ ಡಾ. ದಿಲೀಪ್ ಮಾಲೆ, ಕಾಲೇಜಿನ ಸಿಬ್ಬಂದಿಗಳಾದ ಪರಮೇಶ್ವರ್, ಕು. ಬ್ಲೆಸ್ಸಿ ರಾಣಿ, ಎನ್‍ಸಿಸಿ ಅಧಿಕಾರಿ ಡಾ. ಸಂತೋಷ್ ನಾಯ್ಕ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.



























