
ಯಾದಗಿರಿ:ಜು.೨೯: ಜಿಲ್ಲಾ ನ್ಯಾಯಾಲಯದ ಆದೇಶದಂತೆ ಸಂತ್ರಸ್ತರಿಗೆ ಪರಿಹಾರ ಮೊತ್ತ ಪಾವತಿಸಿ, ಜಪ್ತಿಯಾಗಿರುವ ನಗರಸಭೆಯ ಸಾಮಾನುಗಳನ್ನು ಕೂಡಲೇ ಬಿಡುಗಡೆಗೊಳಿಸಿ ಸಾರ್ವಜನಿಕ ಸೇವೆಗೆ ಯಾವುದೇ ಅಡಚಣೆ ಉಂಟಾಗದAತೆ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ರಾಜ್ಯ ಕಾರ್ಯಕಾರಿ ಸದಸ್ಯ ಮಹೇಶರೆಡ್ಡಿ ಮುದ್ನಾಳ ಜಿಲ್ಲಾಧಿಕಾರಿ ಹಾಗೂ ನಗರಸಭೆ ಪೌರಾಯುಕ್ತರನ್ನು ಆಗ್ರಹಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ನಗರದ ಸಾರ್ವಜನಿಕರ ಜೀವನಾಡಿಯಾಗಿರುವ ನಗರಸಭೆ ಅತ್ಯಂತ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದ್ದಾರೆ.
ನ್ಯಾಯಾಲಯದ ಆದೇಶಗಳು ಹಾಗೂ ನಿಯಮಗಳನ್ನು ಸಮರ್ಪಕವಾಗಿ ಪಾಲಿಸಿದ್ದರೆ ಇಂತಹ ಪರಿಸ್ಥಿತಿ ಎದುರಾಗುತ್ತಿರಲಿಲ್ಲ. ಪ್ರತಿದಿನ ನೂರಾರು ನಾಗರಿಕರು ವಿವಿಧ ಕೆಲಸಗಳಿಗಾಗಿ ನಗರಸಭೆಯನ್ನು ಅವಲಂಬಿಸಿರುತ್ತಾರೆ. ಆದ್ದರಿಂದ ಸಾರ್ವಜನಿಕರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು, ಸಂತ್ರಸ್ತರಿಗೆ ನ್ಯಾಯಾಲಯದ ಆದೇಶದಂತೆ ಪರಿಹಾರ ಹಣ ಪಾವತಿಸಿ, ಜಪ್ತಿಯಾಗಿರುವ ಸಾಮಾನುಗಳನ್ನು ಕೂಡಲೇ ಬಿಡುಗಡೆಗೊಳಿಸುವಂತೆ ಸಂಬAಧಪಟ್ಟ ಅಧಿಕಾರಿಗಳು ತುರ್ತು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.































