
ಕೋಲಾರ. ಸೆ.೨- ಗ್ರಾಮೀಣ ಭಾಗದಲ್ಲಿ ಧಾರ್ಮಿಕ ಆಚರಣೆಗಳು ಹಾಗೂ ಪೂಜಾ ಕಾರ್ಯಕ್ರಮಗಳು ಜನರಲ್ಲಿ ಸೌಹಾರ್ದತೆ, ಒಗ್ಗಟ್ಟು ಮತ್ತು ಪರಸ್ಪರ ಬಾಂಧವ್ಯ ಬೆಳೆಸಲು ಸಹಕಾರಿಯಾಗುತ್ತವೆ ಎಂದು ಶಾಸಕ ಕೊತ್ತೂರು ಜಿ. ಮಂಜುನಾಥ್ ತಿಳಿಸಿದರು
ತಾಲ್ಲೂಕಿನ ಅರಾಭಿಕೊತ್ತನೂರು ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ನಾಗರಕಲ್ಲು ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಅವರು ಮಾತನಾಡಿದರು.
ಗ್ರಾಮಸ್ಥರು ಒಗ್ಗೂಡಿ ಧಾರ್ಮಿಕ ಕಾರ್ಯಕ್ರಮ ಆಯೋಜಿಸಿರುವುದು ಸಂತಸದ ವಿಚಾರ. ನಾಗರಕಲ್ಲು ಪ್ರತಿಷ್ಠಾಪನೆಯಿಂದ ಗ್ರಾಮದ ಶಾಂತಿ, ಸಮೃದ್ಧಿ ಮತ್ತಷ್ಟು ಹೆಚ್ಚಲಿ ಎಂದು ಹಾರೈಸಿದ ಅವರು, ಗ್ರಾಮದ ಸವಾಂಗೀಣ ಅಭಿವೃದ್ಧಿಗೆ ಅಗತ್ಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ವಿಧಾನ ಪರಿಷತ್ ಸದಸ್ಯ ಎಂ.ಎಲ್. ಅನಿಲ್ ಕುಮಾರ್ ಮಾತನಾಡಿ, ಗ್ರಾಮಸ್ಥರೆಲ್ಲರೂ ಒಗ್ಗೂಡಿ ಇಂತಹ ಧಾರ್ಮಿಕ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದು ಶ್ಲಾಘನೀಯ. ಇಂತಹ ಕಾರ್ಯಕ್ರಮಗಳು ಗ್ರಾಮದಲ್ಲಿ ಪರಸ್ಪರ ಸಹಕಾರ ಮತ್ತು ಸೌಹಾರ್ದತೆಯನ್ನು ಮತ್ತಷ್ಟು ಬಲಪಡಿಸುತ್ತವೆ ಎಂದರು.
ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಗ್ರಾಮಾಂತರ ಬ್ಲಾಕ್ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ಹಿರಿಯ ಕಾಂಗ್ರೆಸ್ ಮುಖಂಡರಾದ ಮುನಿಆಂಜಿನಪ್ಪ, ಗ್ರಾಮದ ಮುಖಂಡರಾದ ಗಜೇಂದ್ರ, ಚಂದ್ರಶೇಖರ್, ಸೋಮಶೇಖರ್, ಕಿಶೋರ್, ರೂಪೇಶ್, ಪುನೀತ್, ದರ್ಶನ್, ಸುಹೇಲ್ ಸೇರಿದಂತೆ ಅನೇಕ ಗ್ರಾಮಸ್ಥರು ಉಪಸ್ಥಿತರಿದ್ದರು.
































