
ಜೇವರ್ಗಿ: ಮಾ.2:ಒಂದು ತಿಂಗಳ ಕಾಲ ಮುಸ್ಲಿಮರು ಉಪವಾಸ ವೃತ ಆಚರಿಸಿದ್ದಾರೆ. ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ಅನ್ನ, ನೀರು ಬಿಟ್ಟು ಉಪವಾಸ ವ್ರತ ಆಚರಿಸುತ್ತಾರೆ. ಉಪವಾಸ (ರೋಜಾ) ಮಾತ್ರವಲ್ಲದೇ ದಾನ ( ಝಕಾತ್) ನಮಾಜ್, ಕುರಾನ್ ಪಠನ, ತರಾವೀಹ್ ಮಾಡುವ ಮೂಲಕ ದೇವರನ್ನು ( ಅಲ್ಲಾಹ್ ನನ್ನು) ಸ್ಮೃತಿಸಲಾಗುತ್ತದೆ. ಎಂದು ಜೇವರ್ಗಿ ಬ್ಯಾಡ್ಮಿಂಟನ್ ಸ್ಪೋಟ್ರ್ಸ್ ಅಸೋಸಿಯೇಷನ್ ಅಧ್ಯಕ್ಷರಾದ ಡಾ.ರಾಘು ಹವಲ್ದಾರ್ ಹೇಳಿದರು.
ಪಟ್ಟಣದ ಕ್ರಿಡಾಂಗಣದಲ್ಲಿ ಜೇವರ್ಗಿ ಬ್ಯಾಡ್ಮಿಂಟನ್ ಸ್ಪೋಟ್ರ್ಸ್ ಅಸೋಸಿಯೇಷನ್ ವತಿಯಿಂದ ರಂಜಾನ್ ಪ್ರಯುಕ್ತ ಹಮ್ಮಿಕೊಂಡಿದ್ದ ಇಪ್ತಿಯಾರ ಕೂಟದಲ್ಲಿ ಭಾಗವಹಿಸಿ ಮಾತನಾಡಿದ ಅವರು ಈ ಆಚರಣೆಯ ನಂಬಿಕೆಯಂತೆ, ಅಲ್ಲಾನೊಂದಿಗಿನ ತಮ್ಮ ಸಂಬಂಧವನ್ನು ಇನ್ನಷ್ಟು ಗಟ್ಟಿಗೊಳಿಸಲು, ಉಪವಾಸ ಎಂಬುದು ಆತ್ಮಸ್ಥೈರ್ಯ ಹೆಚ್ಚಿಸಲು, ಹಸಿವಿನ ಮಹತ್ವ ಮತ್ತು ಅದೃಷ್ಟ ಸಂಪಾದನೆ ಮಾಡಲು ಶ್ರದ್ಧೆಯಿಂದ ಉಪವಾಸವನ್ನು ಆಚರಿಸುತ್ತಾರೆ. ಎಂದರು
ನಂತರ ಖಜಾಂಚಿಯಾದ ಈರಣ್ಣ ಮಾಲಿಪಾಟೀಲ ಮಾತನಾಡುತ್ತ. ತಿಂಗಳ ಪ್ರತಿಯೊಂದು ದಿನ ಮುಸ್ಲಿಮರು, ಈ ಹಬ್ಬದ ಆಚರಣೆ ಮೂಲಕ ಅಲ್ಲಾನಲ್ಲಿ ನಂಬಿಕೆ ಇಟ್ಟುಕೊಳ್ಳುತ್ತಾರೆ. ಪ್ರಾರ್ಥನೆ, ಕುರಾನ್ ಪಠಣ ಮತ್ತು ದಾನ-ಧರ್ಮದಲ್ಲಿ ತೊಡಗುವುದು ಮಾತ್ರವಲ್ಲದೇ ಸ್ನೇಹಿತರು ಮತ್ತು ಕುಟುಂಬದವ ರೊಂದಿಗೆ ತಮ್ಮ ಒಡನಾಟವನ್ನು ಇನ್ನಷ್ಟು ಗಟ್ಟಿಯಾಗಿಸುತ್ತಾರೆ. ಸೂರ್ಯೋದಯದಕ್ಕಿಂತ ಮುಂಚೆ ಕುಟುಂಬ ಸದಸ್ಯರೊಂದಿಗೆ ಸೇವಿಸುವ ಆಹಾರ ವೇಳೆ ( ಸಹಿರಿ) ಹಾಗೂ ಸೂರ್ಯಾಸ್ತದ ವೇಳೆ ಉಪವಾಸ ಮುರಿಯುವ ವೇಳೆ (ಇಫ್ತಾರ್) ಉಪವಾಸದ ಪ್ರಮುಖ ಸಮಯ ಈಫ್ತಿಯಾರ್ ವೇಳೆಯಲ್ಲಿ ಎಲ್ಲರೂ ಒಂದೇ ಕಡೆ ಸೇರಿ ಮಸೀದಿಗಳಲ್ಲಿ, ಕೆಲವರು ಮನೆಗಳಲ್ಲಿ ಸೇರಿ ಖರ್ಜೂರ, ಬಾಳೆ ಹಣ್ಣು, ಕಲ್ಲಂಗಡಿ ಸೇರಿದಂತೆ ಎಲ್ಲಾ ಬಗೆಯ ಹಣ್ಣು- ಹಂಪಲು ತಂದು ಒಂದೆಡೆ ಸೇರಿಸಿ ಸಾಮೂಹಿಕವಾಗಿ ಸೇವಿಸುವ ಮೂಲಕ ಉಪವಾಸ ವ್ರತ ಮುಗಿಸುತ್ತಾರೆ. ಆ ಮೂಲಕ ಬಡವ, ಶ್ರೀಮಂತ ಉನ್ನತ, ಕನಿಷ್ಟ ಎಂಬ ಬೇಧಬಾವ ಮರೆತು ಮಾನವಿಯತೆ ಮೆರೆಯುವ ಮೂಲಕ ಸಂಬಂಧವನ್ನು ಗಟ್ಟಿಗೊಳಿಸಿಕೊಳ್ಳುತ್ತಾರೆ. ಎಂದರು.
ಈ ಸಂದರ್ಭದಲ್ಲಿ ಜೇವರ್ಗಿ ಪೆÇೀಲಿಸ್ ಠಾಣೆಯ ಸಿಪಿಐ ನಧಾಪ್ ಸರ್, ವ್ಯವಸ್ಥಾಪಕರಾದ ಈರಣ್ಣ ಹರವಾಳ, ಸಂಗಮೇಶ ಕೊಂಬಿನ, ಗುರುರಾಜ ಪಾಟೀಲ್, ಗಂಗಾಧರ, ಡಾ. ಪ್ರವೀಣ, ತಸ್ಲಿಂ ಸರ್, ಶಿವು ಕಲ್ಲಾ, ಗುರು ಅವರಾದ, ರಮೇಶ್ ಪತ್ತಾರ, ವಿಠ್ಠಲ ಆಂದೋಲಾ, ರುದ್ರಗೌಡ ಮಾಲಿ ಪಾಟೀಲ್, ರಾಜಶೇಖರ ಜೈನಾಪುರ, ಅನೀಲ ಹಾಲಕಾಯಿ, ಮಹಿಬೂಬ, ಅಬ್ದುಲ್ ಖಹಿಮ್, ಮುಸ್ತಫಾ, ಅಲ್ತಾಫ್, ರಹಿಮೋದ್ದಿನ, ಮೋಹಿನ, ಸೇರಿದಂತೆ ಅನೇಕ ಉಪಸ್ಥಿತರಿದ್ದರು

























