ಕಲಬುರಗಿ,ಸೆ.10-ಜ್ಞಾನಕ್ಕೆ ಅಗ್ರಸ್ಥಾನ ನೀಡಬೇಕೆಂದರೆ ಹಾಗೂ ಜಗತ್ತಿನ ಚುಕ್ಕಾಣಿ ಹಿಡಿಯಬೇಕಾದರೆ ಜ್ಞಾನದ ಸಂಪತ್ತು ಹೊಂದುವ ಅನಿವಾರ್ಯತೆ ಇದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಐಟಿ ಬಿಟಿ ಹಾಗೂ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
2024-25 ಮತ್ತು 2025-26 ಸಾಲಿನ ಕೆಕೆಆರ್ ಡಿಬಿ ಮ್ಯಾಕ್ರೋ ಯೋಜನೆಯಡಿಯಲ್ಲಿ ನವೀಕರಣಗೊಂಡ ಎಸ್ ಎಂ ಪಂಡಿತ್ ರಂಗಮಂದಿರ ಉದ್ಘಾಟನೆ ನೆರವೇರಿಸಿ ಹಾಗೂ ಶಿಕ್ಷಕರ ದಿನಾಚರಣೆ ನೆರವೇರಿಸಿ ಅವರು ಮಾತನಾಡುತ್ತಿದ್ದರು.
ಜ್ಞಾನ ಹಾಗೂ ಕೌಶಲ್ಯದ ರಾಜಧಾನಿಯಾಗಿ ರಾಜ್ಯ ಮುನ್ನುಗ್ಗುತ್ತಿದೆ. ವಿದೇಶಗಳಿಗೆ ಭೇಟಿ ನೀಡಿದಾಗ ನಮ್ಮ ರಾಜ್ಯದ ಕೌಶಲ್ಯ ಅಭಿವೃದ್ದಿಯ ಬಗ್ಗೆ ಮಾತನಾಡುತ್ತಾರೆ. ಇದು ಹೆಮ್ಮೆಯ ಸಂಗತಿಯಾಗಿದೆ. ಬಂಡವಾಳ ಆಕರ್ಷಣೆಗೆ ಕೇವಲ ಆರ್ಥಿಕ ನೀತಿಗಳಲ್ಲ ಶಿಕ್ಷಣ ಹಾಗೂ ಜ್ಞಾನಕ್ಕೆ ಅಗ್ರಸ್ಥಾನ ನೀಡಬೇಕು ಎನ್ನುವುದು ಇದರಿಂದ ಸಾಬೀತಾಗುತ್ತದೆ. ಅದು ಶಿಕ್ಷಕರಿಂದ ಮಾತ್ರ ಸಾಧ್ಯ. ಶಿಕ್ಷಕರಿಲ್ಲದೇ ಸಮಾಜವಿಲ್ಲ ಹಾಗೂ ದೇಶವಿಲ್ಲ ಎಂದರು.
ಪ್ರಗತಿಪರ ಸಮಾಜ ಕಟ್ಟಬೇಕಾದರೆ ವೈಜ್ಞಾನಿಕ ಮನೋಭಾವನೆ ಬೆಳೆಸಬೇಕು ಇದರ ಜೊತೆಗೆ ಕುತೂಹಲ ಬೆಳೆಸುವುದು ಕೂಡಾ ಬಹಳ ಮುಖ್ಯವಾಗಿದೆ. ವಿದ್ಯಾರ್ಥಿಗಳು ಪ್ರಶ್ನೆ ಕೇಳುವಂತೆ ಅವರನ್ನು ಪ್ರೇರೇಪಿಸಬೇಕು ಎಂದು ಕರೆ ನೀಡಿದ ಸಚಿವರು ಪುರಾಣಗಳು ಸಾಂಸ್ಕøತಿಕ ಗುರುತಿನ ಪ್ರತೀಕಗಳಾಗಿವೆ. ಆಧ್ಯಾತ್ಮಿಕ ಹಾಗೂ ನೈತಿಕ ಮೌಲ್ಯಗಳ ಬೆಳವಣಿಗೆಗೆ ಪುರಾಣಗಳು ಬೇಕು.
ಆದರೆ, ಪುರಾಣಗಳನ್ನು ಇತಿಹಾಸಗಳೆಂದು ಹಾಗೂ ವಿಜ್ಞಾನವೆಂದು ತಪ್ಪಾಗಿ ಆರ್ಥೈಸಲಾಗುತ್ತಿದೆ. ಬದಲಿಗೆ ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವನೆ ಬೆಳೆಸಬೇಕು ಎಂದು ಅಭಿಪ್ರಾಯಪಟ್ಟರು.
ಪ್ರಬುದ್ಧ ಸಮಾಜ ನಿರ್ಮಾಣ ಮಾಡುವಲ್ಲಿ ಶಿಕ್ಷಕರ ಪಾತ್ರ ಹಿರಿದಾಗಿದೆ ಎಂದು ಅಭಿಪ್ರಾಯಪಟ್ಟ ಸಚಿವರು ಬುದ್ಧ, ಬಸವ ಹಾಗೂ ಅಂಬೇಡ್ಕರ್ ಅವರು ಕೂಡಾ ಪ್ರಬುದ್ಧ ಸಮಾಜ ನಿರ್ಮಾಣಕ್ಕೆ ಒತ್ತು ನೀಡಿದ್ದರು ಇದನ್ನು ಶಿಕ್ಷಕರು ಮನಗಾಣಬೇಕು ಎಂದರು.
ಜಿಲ್ಲೆಯ ಶೈಕ್ಷಣಿಕ ಪ್ರಗತಿಗೆ ಅಗತ್ಯವಿರುವ ಕಾರ್ಯಕ್ರಮಗಳಿದ್ದರೂ ಕೂಡಾ ಪರೀಕ್ಷಾ ಫಲಿತಾಂಶದ ಶೇಕಡಾವರು ಪ್ರಗತಿ ಕಂಡುಬರುತ್ತಿಲ್ಲ ಎಂದು ಸಚಿವರು ಈ ಸಲದ ಎಸ್ ಎಸ್ ಎಲ್ ಸಿ ಯ ಪರೀಕ್ಷೆಯ ಫಲಿತಾಂಶ ನಿರಾಶೆದಾಯಕವಾಗಿತ್ತು. ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ಶಿಕ್ಷಕರು ಈ ನಿಟ್ಟಿನಲ್ಲಿ ಅಗತ್ಯಶ್ರಮವಹಿಸಿ ಮುಂಬರುವ ಪರೀಕ್ಷೆ ಗಳಲ್ಲಿ ಫಲಿತಾಂಶದ ಗಣನೀಯ ಹೆಚ್ಚಳಕ್ಕೆ ಪ್ರಯತ್ನಿಸಬೇಕು ಎಂದು ಶಿಕ್ಷಕರಿಗೆ ಕರೆ ನೀಡಿದರು.
2024-25. ಸಾಲಿನಲ್ಲಿ ಎಸ್ ಎಸ್ ಎಲ್ ಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ಸರ್ಕಾರ ಶಾಲೆಯ ಮೂವರು ವಿದ್ಯಾರ್ಥಿಗಳಾದ ನೀಲಮ್ಮ, ಶಿವಕುಮಾರ ಹಾಗೂ ಸಂಪತ್ ಕುಮಾರ್ ಅವರಿಗೆ ಲ್ಯಾಪ್‍ಟಾಪ್ ವಿತರಿಸಲಾಯಿತು.
ಅತ್ಯುತ್ತಮ ಶಿಕ್ಷಕ ಪ್ರಶಸ್ತಿಪಡೆದ 23 ಶಿಕ್ಷಕರಿಗೆ ಸನ್ಮಾನ ನೆರವೇರಿಸಿಲಾಯಿತು.
ವೇದಿಕೆಯ ಮೇಲೆ ಎಮ್ ಎಲ್ ಸಿಗಳಾದ ಶಶಿಲ್ ನಮೋಶಿ, ಬಿ.ಜಿ.ಪಾಟೀಲ್, ಮಹಾನಗರ ಪಾಲಿಕೆ ಮಹಾಪೌರ ವರ್ಷಾ ರಾಜೀವ್ ಜಾನೆ, ಕುಡಾ ಅದ್ಯಕ್ಷ ಮಜರ್ ಆಲಂಖಾನ್, ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್, ಪೆÇಲೀಸ್ ಕಮೀಷನರ್ ಶರಣಪ್ಪ ಢಗೆ, ಕೆಕೆಆರ್ ಟಿಸಿ ಎಂಡಿ ಬಿ.ಸುಶೀಲಾ, ಕೆಕೆಆರ್‍ಡಿಬಿ ಚೇರ್ ಮನ್ ನಳಿನ್ ಅತುಲ್, ಎಸ್ ಪಿ ಅಡ್ಡೂರು ಶ್ರೀನಿವಾಸಲು, ಪಾಲಿಕೆ ಆಯುಕ್ತ ಅವಿನಾಶ್ ಶಿಂಧೆ, ಸೇರಿದಂತೆ ಮತ್ತಿತರಿದ್ದರು.
……
-ನವೀಕರಣಕ್ಕಾಗಿ ಕೆಕೆಆರ್ ಡಿಬಿ ಯಿಂದ ರೂ 4.80 ಕೋಟಿ ಅನುದಾನ ಬಿಡುಗಡೆ.
- ಉನ್ನತ ಗುಣಮಟ್ಟದ ಆಸನ, ಸೌಂಡ್ ಸಿಸ್ಟಂ, ಬಗೆಬಗೆ ಬಣ್ಣದ ಲೈಟಿಂಗ್ ಅಳವಡಿಕೆ.
-ಪ್ರೇಕ್ಷಕರಿಗೆ ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಲಭ್ಯ. - ನೆಲಮಹಡಿಯಲ್ಲಿ 552 ಆಸನಗಳನ್ನು ಹಾಗೂ ಮೊದಲ ಮಹಡಿಯಲ್ಲಿ 303 ಆಸನಗಳನ್ನು ಸೇರಿಸಿ ಒಟ್ಟು 855 ಆಸನಗಳನ್ನು ಹೊಂದಿದೆ.
- ನೂತನ ಮಾದರಿಯ ಪುಷ್ ಬ್ಯಾಕ್ ( ಹಿಂದಕ್ಕೆ ತಳ್ಳುವ ) ಉತ್ತಮ ಗುಣಮಟ್ಟದ ಆಸನಗಳನ್ನು ಅಳವಡಿಸಲಾಗಿದೆ.

































