ನವನಿಹಾಳ (ಕಲಬುರಗಿ): ಜು.20:ಖ್ಯಾತ ಕನ್ನಡ ಚಿತ್ರನಟಿ ಹಾಗೂ ಮಾಜಿ ಸಚಿವೆ ಉಮಾಶ್ರೀ ಅವರು ಶ್ರೀ ಸತ್ಯಸಾಯಿ ವಿದ್ಯಾನಿಕೇತನ, ನವನಿಹಾಳಕ್ಕೆ ಭೇಟಿ ನೀಡಿ, ಸಂಸ್ಥೆಯಲ್ಲಿ ನಡೆಯುತ್ತಿರುವ ಶೈಕ್ಷಣಿಕ ಹಾಗೂ ಸೇವಾ ಚಟುವಟಿಕೆಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ಉಮಾಶ್ರೀ ಅವರನ್ನು ವಿಶ್ವವಿದ್ಯಾಲಯದ ಕುಲಪತಿ ಪೆÇ್ರ. ಶ್ರೀಕಂಠ ಮೂರ್ತಿ ಅವರು ಶಾಲು ಹೊದಿಸಿ, ಸ್ಮರಣಿಕೆ ನೀಡಿ ಆತ್ಮೀಯವಾಗಿ ಸ್ವಾಗತಿಸಿ ಸನ್ಮಾನಿಸಿದರು. ಬಳಿಕ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಶೈಕ್ಷಣಿಕ ಚಟುವಟಿಕೆಗಳು, ವಿವಿಧ ಸೇವಾ ಯೋಜನೆಗಳು ಹಾಗೂ ಭವಿಷ್ಯದ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತು ವಿವರಿಸಿದರು.
ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಡಲಾಗುತ್ತಿರುವ ಮೌಲ್ಯಾಧಾರಿತ ಶಿಕ್ಷಣ, ಶಿಸ್ತು, ಆಧುನಿಕ ಸೌಲಭ್ಯಗಳು ಹಾಗೂ ಸರ್ವತೋಮುಖ ಅಭಿವೃದ್ಧಿಗಾಗಿ ಕೈಗೊಳ್ಳಲಾಗುತ್ತಿರುವ ಕಾರ್ಯಗಳನ್ನು ವೀಕ್ಷಿಸಿದ ಉಮಾಶ್ರೀ ಅವರು, ಇಂತಹ ಶಿಕ್ಷಣ ಸಂಸ್ಥೆಗಳು ಸಮಾಜಕ್ಕೆ ಮಾದರಿಯಾಗಿದ್ದು, ಉತ್ತಮ ನಾಗರಿಕರನ್ನು ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿವೆ ಎಂದು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ಅಧಿಕಾರಿಗಳು, ಅಧ್ಯಾಪಕರು ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
ಶ್ರೀ ಸತ್ಯಸಾಯಿ ವಿದ್ಯಾನಿಕೇತನಕ್ಕೆ ನಟಿ ಉಮಾಶ್ರೀ ಭೇಟಿ
*ಉಚಿತ, ಮೌಲ್ಯಾಧಾರಿತ ಶಿಕ್ಷಣ ವ್ಯವಸ್ಥೆಗೆ ಮೆಚ್ಚುಗೆ
ನವನಿಹಾಳ (ಕಲಬುರಗಿ): ಕನ್ನಡಚಿತ್ರರಂಗದ ಖ್ಯಾತ ನಟಿ, ವಿಧಾನ ಪರಿಷತ್ ಸದಸ್ಯೆ ಉಮಾಶ್ರೀ ಅವರು ಇಲ್ಲಿನ ಶ್ರೀ ಸತ್ಯಸಾಯಿ ವಿದ್ಯಾನಿಕೇತನ ಗುರುಕುಲಕ್ಕೆ ಭೇಟಿ ನೀಡಿ, ಸಂಸ್ಥೆಯಲ್ಲಿ ನಡೆಯುತ್ತಿರುವ ಶೈಕ್ಷಣಿಕ ಹಾಗೂ ಸೇವಾ ಚಟುವಟಿಕೆಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ಉಮಾಶ್ರೀ ಅವರನ್ನು ಸತ್ಯ ಸಾಯಿ ಮಾನವ ಅಭ್ಯುದಯ ವಿಶ್ವವಿದ್ಯಾಲಯದ ಕುಲಪತಿ ಪೆÇ್ರ. ಶ್ರೀಕಂಠ ಮೂರ್ತಿ ಅವರು ಸನ್ಮಾನಿಸಿದರು. ಬಳಿಕ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಶೈಕ್ಷಣಿಕ ಚಟುವಟಿಕೆಗಳು, ವಿವಿಧ ಸೇವಾ ಯೋಜನೆಗಳು, ಸದ್ಗುರು ಮಧುಸೂದನ ಸಾಯಿ ನೇತೃತ್ವದಲ್ಲಿ ನಡೆಯುತ್ತಿರುವ ಒನ್ ವಲ್ರ್ಡ್ ಒನ್ ಫ್ಯಾಮಿಲಿ ಅಭಿಯಾನದ ಕುರಿತು ವಿವರಿಸಿದರು.