
ಕಲಬುರಗಿ,ಜ.25-ನಗರದ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಜ.26 ರಂದು ಬೆಳಿಗ್ಗೆ 7.20ಕ್ಕೆ 77ನೇ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಮಾಡಲಾಗುವದು ಎಂದು ಪಕ್ಷದ ಜಿಲ್ಲಾ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯರಾದ ಜಗದೇವ ಗುತ್ತೇದಾರ ಕಾಳಗಿ ಅವರು ತಿಳಿಸಿದ್ದಾರೆ.
ಈ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಎಲ್ಲಾ ಹಾಲಿ ಹಾಗೂ ಮಾಜಿ ಸಂಸದರು, ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಮುಖಂಡರು, ವಿವಿಧ ನಿಗಮ/ಮಂಡಳಿ ಅಧ್ಯಕ್ಷರು, ಕೆಪಿಸಿಸಿ ಹಾಗೂ ಡಿಸಿಸಿ ಪದಾಧಿಕಾರಿಗಳು ಹಾಗೂ ಸದಸ್ಯರು, ಜಿಲ್ಲಾ ಕಾಂಗ್ರೆಸ್ ಸಮಿತಿ ಮಾಜಿ ಅಧ್ಯಕ್ಷರು, ಡಿಸಿಸಿ ಡೇಲಿಗೇಟ ಸದಸ್ಯರು, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಜಿಲ್ಲಾ ಕಾಂಗ್ರೆಸ್ ಸಮಿತಿ ವಿವಿಧ ಮೂಂಚೂಣಿ ಘಟಕ, ವಿಭಾಗಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಕಾಂಗ್ರೆಸ್ ಪಕ್ಷದ ಜಿಲ್ಲಾ ಪಂಚಾಯತ್, ತಾಲೂಕಾ ಪಂಚಾಂiÀiತ್, ಗ್ರಾಮ ಪಂಚಾಯತ್, ನಗರ ಸಭೆ, ಪುರಸಭೆ, ಪಟ್ಟಣ ಪಂಚಾಯತ್, ಎಪಿಎಂಸಿಯ ಹಾಲಿ ಹಾಗೂ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು, ಮಹಾ ನಗರ ಪಾಲಿಕೆಯ ಹಾಲಿ ಹಾಗೂ ಮಾಜಿ ಪೂಜ್ಯ ಮಹಾಪೌರರು, ಉಪ ಮಹಾಪೌರರು ಹಾಗೂ
ಸದಸ್ಯರುಗಳು, ಮಹಿಳೆಯರು, ಯುವಕರು ಕಾಂಗ್ರೆಸ್ ಪಕ್ಷದ ಎಲ್ಲಾ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.























