Home ಜಿಲ್ಲೆ ಹಿರಿಯ ನಾಗರಿಕರಿಗೆ ಪ್ರತ್ಯೇಕ ಸಚಿವಾಲಯಕ್ಕೆ ಮನವಿ

ಹಿರಿಯ ನಾಗರಿಕರಿಗೆ ಪ್ರತ್ಯೇಕ ಸಚಿವಾಲಯಕ್ಕೆ ಮನವಿ

ಲಕ್ಷೆö್ಮÃಶ್ವರ,ಜು೪: ರಾಜ್ಯ ಸರ್ಕಾರ ಹಿರಿಯ ನಾಗರಿಕರಿಗೆ ನೀಡಬೇಕಾದ ಸೌಲಭ್ಯ ನೀಡುವಲ್ಲಿ ಮುಂದಾಗಬೇಕು ಹಾಗೂ ಹಿರಿಯ ನಾಗರಿಕರಿಗಾಗಿ ಪ್ರತ್ಯೇಕ ಸಚಿವರು ಹಾಗೂ ಸಚಿವಾಲಯ ಸ್ಥಾಪನೆ ಮಾಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿ ಲಕ್ಷೆö್ಮÃಶ್ವರ ತಾಲೂಕಿನ ಗ್ರೇಡ್ -೨ ತಹಸೀಲ್ದಾರ ಮಂಜುನಾಥ ಅಮಾಸಿ ಅವರಿಗೆ ಮನವಿ ಸಲ್ಲಿಸಿದರು.


ಈ ವೇಳೆ ಹಿರಿಯ ನಾಗರಿಕರ ವೇದಿಕೆಯ ತಾಲೂಕಾ ಅಧ್ಯಕ್ಷ ಸಿ.ಆರ್.ಲಕ್ಕುಂಡಿಮಠ ಅವರು ಮಾತನಾಡಿ ರಾಜ್ಯದಲ್ಲಿ ಹಿರಿಯ ನಾಗರಿಕರಿಗೆ ದೊರಯಬೇಕಾದ ಸೌಲಭ್ಯಗಳನ್ನು ಸಮರ್ಪಕವಾಗಿ ಮುಟ್ಟಿಸುವಲ್ಲಿ ಮೀನಾಮೇಷ ಎಣಿಸುತ್ತಿರುವುದು ಸರಿಯಲ್ಲ. ರಾಜ್ಯದಲ್ಲಿ ಹಿರಿಯ ನಾಗರಿಕರ ಮೇಲೆ ನಿರಂತರ ದೌರ್ಜನ್ಯ, ಅನ್ಯಾಯಗಳು ನಡೆಯುತ್ತಿದ್ದು, ಅವುಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಮುಂದಾಗಬೇಕು ಹಾಗೂ ಹಿರಿಯ ನಾಗರಿಕರ ಬೇಡಿಕೆಗಳನ್ನು ತಕ್ಷಣವೇ ಈಡೇರಿಸುವ ಮೂಲಕ ಹಿರಿಯ ಜೀವಿಗಳಿಗೆ ನ್ಯಾಯ ಒದಗಿಸುವ ಕಾರ್ಯ ಮಾಡಬೇಕು ಎಂದು ಹೇಳಿದ ಅವರು ರಾಜ್ಯದಲ್ಲಿ ಸುಮಾರು ೮೫ ಲಕ್ಷ ಹಿರಿಯ ನಾಗರಿಕರು ಇದ್ದು ಅವರಿಗೆ ದೊರೆಯಬೇಕಾದ ಮೂಲ ಸೌಲಭ್ಯ ದೊರಕಿಸಿ ಕೊಡುವಲ್ಲಿ ರಾಜ್ಯ ಸರ್ಕಾರ ಮುಂದಾಗಬೇಕು ಎಂದು ಮನವಿ ಮಾಡಿದರು.


ಈ ವೇಳೆ ತಹಸೀಲ್ದಾರ ಮಂಜುನಾಥ ಅಮಾಸಿ ಅವರು ಮಾತನಾಡಿ ಹಿರಿಯ ನಾಗರಿಕರು ಕೊಡಮಾಡಿರುವ ಮನವಿಯನ್ನು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಕಳುಹಿಸಿಕೊಡುವ ಕಾರ್ಯ ಮಾಡುತ್ತೇವೆ ಎಂದು ಹೇಳಿದರು.


ಈ ವೇಳೆ ಚಂಬಣ್ಣ ಬಾಳಿಕಾಯಿ. ಕುಬೇರಪ್ಪ ಮಹಾಂತಶೆಟ್ಟರ, ನೀಲಪ್ಪ ಕರ್ಜಕಣ್ಣವರ, ಬಾಬಣ್ಣ ವಡಕಣ್ಣವರ, ಮಲಸಮುದ್ರ, ಐ.ಎಸ್.ಮಡಿವಾಳರ ಸೇರಿದಂತೆ ಅನೇಕರು ಇದ್ದರು.