Home ಜಿಲ್ಲೆ ಕಲಬುರಗಿ ನಿಗಮ ಮಂಡಳಿಗೆ ನೇಮಕ ಮಾಡಲು ಮನವಿ

ನಿಗಮ ಮಂಡಳಿಗೆ ನೇಮಕ ಮಾಡಲು ಮನವಿ

ಕಲಬುರಗಿ,ಜೂ.24-ಇಂದು ಅಖಿಲ ಭಾರತ ವೀರಶೈವ ಮಹಾಸಭಾ ತಾಲೂಕು ಘಟಕದ ವತಿಯಿಂದ ವಿರಶೈವ ಲಿಂಗಾಯತ ಸಮಾಜದ ಹಿರಿಯ ಮುಖಂಡರು ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಶರಣ ಪ್ರಕಾಶ್ ಪಾಟೀಲ್ ಅವರಿಗೆ ಅಖಿಲ ಭಾರತ ವೀರಶೈವ ಮಹಾಸಭಾ ತಾಲೂಕು ಘಟಕದ ಅಧ್ಯಕ್ಷರಾದ ಸಿದ್ದುಗೌಡ ಅಫಜಲಪೂರಕರ್ ಅವರು ಕರ್ನಾಟಕ ಸರ್ಕಾರದ ಯಾವುದಾದರು ನಿಗಮ ಮಂಡಳಿಗೆ ಅಧ್ಯಕ್ಷರಾಗಿ ನೇಮಕ ಮಾಡುವಂತೆ ವಿನಂತಿಸಿ ಮನವಿ ಪತ್ರ ಸಲ್ಲಿಸಿದರು.
ಜನಸೇವೆಗೆ ಹೆಚ್ಚಿನ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಮನವಿಯನ್ನು ಸಕಾರಾತ್ಮಕವಾಗಿ ಪರಿಗಣಿಸುವಂತೆ ಕೋರಲಾಯಿತು. ಈ ಮನವಿ ಸಲ್ಲಿಸುವ ಸಮಾರಂಭದಲ್ಲಿ ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.