ವಿಜಯಪುರ,ಜೂ.13: ವಿಜಯಪುರ ಜಿಲ್ಲಾ ಕೇಂದ್ರ ಸ್ಥಾನದಲ್ಲಿ ವಾಲ್ಮೀಕಿ ಸಮುದಾಯ ಭವನ ನಿರ್ಮಾಣ ಮಾಡಲು ಅನುದಾನ ಬಿಡುಗಡೆ ಮಾಡಲು ಅಖಿಲ ಭಾರತೀಯ ವಾಲ್ಮೀಕಿ ಸಮಾಜ ಸೇವಾ ಸಂಘ ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರಿಗೆ ಮನವಿ ಸಲ್ಲಿಸಲಾಯಿತು.
ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರು ಮನವಿಗೆ ತಕ್ಷಣ ಸ್ಪಂದಿಸಿ, ವಿಜಯಪುರ ಜಿಲ್ಲಾ ಕೇಂದ್ರ ಸ್ಥಾನದಲ್ಲಿ ವಾಲ್ಮೀಕಿ ಸಮುದಾಯ ಭವನ ನಿರ್ಮಾಣ ಮಾಡಲು ಅನುದಾನ ಬಿಡುಗಡೆ ಮಾಡಲು ವಿನಂತಿಸಿ ಪರಿಶಿಷ್ಟ ವರ್ಗದ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಡಿ. ರಂದೀಪ ಅವರಿಗೆ ದೂರವಾಣಿ ಮೂಲಕ ಕೇಳಿಕೊಂಡಾಗ ಡಿ.ರಂದೀಪ ಅವರು ಸಕಾರಾತ್ಮಕವಾಗಿ ಸ್ಪಂದಿಸಿ ಹಣವನ್ನು ಬಿಡುಗಡೆ ಮಾಡಲಾಗುವುದು ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಅಖಿಲ ಭಾರತೀಯ ವಾಲ್ಮಿಕಿ ಸಮಾಜ ಸೇವಾ ಸಂಘದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಬಟಗಿ ಹಾಗೂ ವಿವಿಧ ಸಂಘಟನೆ ಮುಖಂಡರುಗಳು ಉಪಸ್ಥಿತರಿದ್ದರು.