
ಕಲಬುರಗಿ,ಮೇ.8-ತಾಲ್ಲೂಕಿನ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ನಜಮ್-ಉಲ್-ಇಸ್ಲಾಂ ಅವರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ತಾಲ್ಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಸಭೆಯಲ್ಲಿ ವಿವಿಧ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಗತಿಯನ್ನು ಪರಿಶೀಲಿಸಲಾಯಿತು. ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ಯೋಜನೆಗಳ ಪರಿಣಾಮಕಾರಿ ಜಾರಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಯಿತು.
ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಎಂ.ಡಿ ಸೈಯದ್ ಪಟೇಲ್. ಸೇರಿದಂತೆ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವ ವಿವಿಧ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.






















