
ಸುರಪುರ:ಮಾ.೧೭: ಗುರುಮಠಕಲ್ ಪಟ್ಟಣದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಡಿಯಲ್ಲಿನ ವಸತಿ ನಿಲಯದಲ್ಲಿ ಕಳೆದ ಕೆಲವು ದಿನಗಳ ಹಿಂದೆ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯ ಸಾವಿನ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಕ್ರಾಂತಿಕಾರಿ ಬಣ ರಾಜ್ಯ ಸಂಘಟನಾ ಸಂಚಾಲಕ ಮಲ್ಲಿಕಾರ್ಜುನ ಕ್ರಾಂತಿ ಒತ್ತಾಯಿಸಿದರು.
ಘಟನೆಯನ್ನು ಖಂಡಿಸಿ ನಗರದ ತಹಸಿಲ್ದಾರ್ ಕಚೇರಿಯ ಮುಂದೆ ಸಂಘಟನೆಯಿAದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿ, ಕೆಲ ದಿನಗಳ ಹಿಂದೆ ಗುರುಮಠಕಲ್ ಪಟ್ಟಣದ ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ರೀತಿಯಲ್ಲಿ ಸಾವನ್ನಪ್ಪಿದ್ದು ಕಂಡುಬAದಿದ್ದು ವಿದ್ಯಾರ್ಥಿನಿಯ ಸಾವು ಮೇಲ್ನೋಟಕ್ಕೆ ಕೊಲೆ ಎನ್ನುವ ಅನುಮಾನ ಮೂಡುತ್ತಿದೆ. ಆದ್ದರಿಂದ ವಿದ್ಯಾರ್ಥಿನಿಯ ಸಾವಿನ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ವಿದ್ಯಾರ್ಥಿನಿಯ ಕುಟುಂಬಕ್ಕೆ ಸೂಕ್ತ ಪರಿಹಾರ ಹಾಗೂ ಸರಕಾರಿ ನೌಕರಿಯನ್ನು ನೀಡಬೇಕು ಎಂದು ಒತ್ತಾಯಿಸಿದರು.
ಅಲ್ಲದೆ ರಾಜ್ಯದಲ್ಲಿರುವ ಯಾವುದೇ ವಸತಿ ನಿಲಯದಲ್ಲಿ ಎರಡು ವರ್ಷಕ್ಕಿಂತ ಮೇಲ್ಪಟ್ಟು ಒಂದೇ ಸ್ಥಳದಲ್ಲಿ ಕೆಲಸ ಮಾಡುತ್ತಿರುವ ವಸತಿ ನಿಲಯದ ಮೇಲ್ವಿಚಾರಕರು, ಸೂಪರ್ವೈಸರ್ ಹಾಗೂ ವಾರ್ಡನ್ ಗಳನ್ನು ಬೇರೆ ಜಿಲ್ಲೆಗೆ ವರ್ಗಾವಣೆ ಮಾಡಬೇಕು ಅಂದಾಗ ಮಾತ್ರ ಈ ರೀತಿಯ ಘಟನೆಗಳು ನಡೆಯುವುದು ತಪ್ಪಲಿದೆ. ಈಗಾಗಲೇ ರಾಜ್ಯದ ಅನೇಕ ಕಡೆಗಳಲ್ಲಿ ಈ ರೀತಿ ವಿದ್ಯಾರ್ಥಿಗಳ ಸಾವು ಸಂಭವಿಸುತ್ತಿದ್ದು ಇದಕ್ಕೆ ಸರಕಾರದ ನಿರ್ಲಕ್ಷ ಕಾರಣವಾಗಿದೆ ಆದ್ದರಿಂದ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಇಲ್ಲವಾದಲ್ಲಿ ಮುಂಬರುವ ದಿನದಲ್ಲಿ ನಮ್ಮ ಸಂಘಟನೆಯಿAದ ಉಗ್ರ ಪ್ರತಿಭಟನೆಯನ್ನು ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.
ನಂತರ ಮುಖ್ಯಮಂತ್ರಿಗಳಿಗೆ ಹಾಗೂ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಿಗೆ ಬರೆದ ಮನವಿ ಗ್ರೇಡ್ ೨ ತಹಸಿಲ್ದಾರ್ ಮಲ್ಲಯ್ಯ ದಂಡು ಅವರ ಮೂಲಕ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಮುಖಂಡರುಗಳಾದ ಮೂರ್ತಿ ಬೊಮ್ಮನಹಳ್ಳಿ, ಮಲ್ಲಿಕಾರ್ಜುನ ಎಂ ತಳ್ಳಳ್ಳಿ, ಸರಿತಾ ಎನ್ ಶರ್ಮಾ, ರವಿಚಂದ್ರ ಬೊಮ್ಮನಹಳ್ಳಿ, ಬಸವರಾಜ ದೊಡ್ಡಮನಿ, ಜಟ್ಟೆಪ್ಪ ನಾಗರಾಳ, ಖಾಜಾ ಹುಸೇನ್ ಗುಡಗುಂಟಿ, ಮಹೇಶ ಯಾದಗಿರಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.






















