Home ಜಿಲ್ಲೆ ಕಲಬುರಗಿ 1.04 ಲಕ್ಷ ರೂ.ಮೌಲ್ಯದ ಅಕ್ಕಿ ಜಪ್ತಿ

1.04 ಲಕ್ಷ ರೂ.ಮೌಲ್ಯದ ಅಕ್ಕಿ ಜಪ್ತಿ

ಕಲಬುರಗಿ,ಅ.14-ನಗರದ ಸೇಡಂ ರಸ್ತೆಯ ಹೋಟೆಲ್ ಒಂದರ ಎದರುಗಡೆ ಮತ್ತು ಸಿದ್ದೇಶ್ವರ ಕಾಲೋನಿಯಲ್ಲಿ ಗೂಡ್ಸ್ ವಾಹನಗಳಲ್ಲಿ ಸಾರ್ವಜನಿಕ ಪಡಿತರ ಚೀಟಿದಾರರಿಗೆ ವಿತರಿಸುವ ಹಾಗೂ ಸರ್ಕಾರದ ವಿವಿಧ ಯೋಜನೆಗಳ ಅಡಿ ಬಿಡುಗಡೆಯಾಗುತ್ತಿರುವ ಅಕ್ಕಿಯನ್ನು ಹೆಚ್ಚಿನ ಬೆಲೆಗೆ ಕಾಳಸಂತೆಯಲ್ಲಿ ಮಾರಾಟ ಮಾಡಲು ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಮೇಲೆ ಆಹಾರ ನಿರೀಕ್ಷಕಿ ಅರ್ಚನಾ ಕಟ್ಟಿಮನಿ ಮತ್ತು ವಿಶ್ವ ವಿದ್ಯಾಲಯ ಪೊಲೀಸ್ ಠಾಣೆ ಸಿಬ್ಬಂದಿ ದಾಳಿ ನಡೆಸಿ 1,04,040 ರೂ.ಮೌಲ್ಯದ 30 ಕ್ವಿಂಟಾಲ್ ಅಕ್ಕಿ ಮತ್ತು 3 ಲಕ್ಷ ರೂ.ಮೌಲ್ಯದ ಗೂಡ್ಸ್ ವಾಹನ ಸೇರಿ 4,04,040 ರೂ.ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.
ಈರೇಶ್ ಕೆರೆನವರ್ ಮತ್ತು ಸಿದ್ದು ಬೇಲೂರ್ ವಿರುದ್ಧ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.