
ಕೊಪ್ಪಳ,ಡಿ.೧೮-ಕೊಪ್ಪಳ ತಾಲೂಕಿನ ಇಂದರಗಿ ಗ್ರಾಮದ ಬಳಿ ಬೊಲೆರೋ ವಾಹನ ಡಿಕ್ಕಿ ಹೊಡೆದು ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಯುವಕರು ದುರಂತಸಾವನ್ನಪ್ಪಿದ್ದಾರೆ. ಮೃತರನ್ನು ಕೊಪ್ಪಳ ತಾಲೂಕಿನ ಹೊಸಹಳ್ಳಿ ಗ್ರಾಮದ ನಿವಾಸಿಗಳಾದ ವಾಜಿದ್ ಮತ್ತು ರಾಜಾ ಹುಸೇನ್ ಮತ್ತು ಗಂಗಾವತಿ ತಾಲೂಕಿನ ಶ್ರೀರಾಮನಗರ ನಿವಾಸಿ ಆಸಿಫ್ ಎಂದು ಗುರುತಿಸಲಾಗಿದೆ.
ಬೈಕ್ ಸವಾರರು ಶ್ರೀರಾಮನಗರದಿಂದ ಹೊಸಹಳ್ಳಿ ಗ್ರಾಮಕ್ಕೆ ಪ್ರಯಾಣಿಸುತ್ತಿದ್ದಾಗ ಅಪಘಾತ ಸಂಭವಿಸಿದೆ. ಅಪಘಾತದ ನಂತರ ಬೊಲೆರೋ ಚಾಲಕ ಪರಾರಿಯಾಗಿದ್ದಾನೆ. ಮುನಿರಾಬಾದ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ.



























