Home ಜಿಲ್ಲೆ ಕಲಬುರಗಿ ರಸ್ತೆ ಸುರಕ್ಷತಾ ಅರಿವು ಕಾರ್ಯಕ್ರಮ: ಹೆಲ್ಮೆಟ್ ಕಡ್ಡಾಯಕ್ಕೆ ಒತ್ತಡ

ರಸ್ತೆ ಸುರಕ್ಷತಾ ಅರಿವು ಕಾರ್ಯಕ್ರಮ: ಹೆಲ್ಮೆಟ್ ಕಡ್ಡಾಯಕ್ಕೆ ಒತ್ತಡ

ಕಲಬುರಗಿ:ಮಾ.28: ನಗರದ ಉಪ ಸಾರಿಗೆ ಆಯುಕ್ತರು ಹಾಗೂ ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿಯ ವತಿಯಿಂದ ರಸ್ತೆ ಸುರಕ್ಷತೆ ಕುರಿತು ಮಹತ್ವದ ಅರಿವು ಕಾರ್ಯಕ್ರಮವನ್ನು ಶುಕ್ರವಾರ ನಗರದ ಡ್ರೈವಿಂಗ್ ಟ್ರ್ಯಾಕ್‍ನಲ್ಲಿ ಆಯೋಜಿಸಲಾಯಿತು.
ಕಾರ್ಯಕ್ರಮದಲ್ಲಿ ನಗರದ ಎಲ್ಲಾ ಮೋಟಾರು ವಾಹನ ಚಾಲನಾ ತರಬೇತಿ ಶಾಲೆಗಳ ಪ್ರಾಂಶುಪಾಲರು ಮತ್ತು ಸಿಬ್ಬಂದಿಯವರು ಭಾಗವಹಿಸಿದರು. ದಿನಾಂಕ 05-03-2026 ರಿಂದ ಕಲಬುರಗಿ ನಗರಾದ್ಯಂತ ಪೆÇಲೀಸ್ ಇಲಾಖೆಯಿಂದ ಹೆಲ್ಮೆಟ್ ಧರಿಸುವುದನ್ನು ಕಡ್ಡಾಯಗೊಳಿಸಿರುವ ಹಿನ್ನೆಲೆ, ರಸ್ತೆ ಸುರಕ್ಷತೆ ಕುರಿತು ಜಾಗೃತಿ ಮೂಡಿಸುವುದು ಮತ್ತು ವಾಹನ ಚಾಲಕರಲ್ಲಿ ನಿಯಮ ಪಾಲನೆ ಬಗ್ಗೆ ಅರಿವು ಹೆಚ್ಚಿಸುವುದು ಸಭೆಯ ಮುಖ್ಯ ಉದ್ದೇಶವಾಗಿತ್ತು.
ಸಭೆಯಲ್ಲಿ ಅಧಿಕಾರಿಗಳು ಮಾತನಾಡಿ, ದಿನನಿತ್ಯ ಹೆಚ್ಚುತ್ತಿರುವ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಚಾಲನಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಅಗತ್ಯವಿದೆ ಎಂದು ಹೇಳಿದರು. ವಿಶೇಷವಾಗಿ, ಹೆಲ್ಮೆಟ್ ಧರಿಸುವುದು ಜೀವ ರಕ್ಷಕವಾಗಿದ್ದು, ಎಲ್ಲರೂ ಕಡ್ಡಾಯವಾಗಿ ಪಾಲಿಸಬೇಕು ಎಂದು ಒತ್ತಿ ಹೇಳಿದರು. ಜೊತೆಗೆ ಚಾಲನಾ ತರಬೇತಿ ಶಾಲೆಗಳು ತಮ್ಮ ವಿದ್ಯಾರ್ಥಿಗಳಿಗೆ ಉತ್ತಮ ಹಾಗೂ ಜವಾಬ್ದಾರಿಯುತ ಚಾಲನಾ ತರಬೇತಿ ನೀಡುವಂತೆ ಸೂಚಿಸಿದರು.
ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಎಲ್ಲಾ ಚಾಲನಾ ತರಬೇತಿ ಶಾಲೆಗಳ ಪ್ರಾಂಶುಪಾಲರು ಹಾಗೂ ಸಿಬ್ಬಂದಿಯವರು ಸಕ್ರಿಯವಾಗಿ ಸಹಕರಿಸಿದರು.
ಈ ಸಂದರ್ಭದಲ್ಲಿ ಸಿನಿಯರ್ ಆರ್‍ಟಿಒ ಆನಂದ ಪಾರ್ಥನಳ್ಳಿ, ಟ್ರಾಫಿಕ್ ಎಸಿಪಿ ಪ್ರಭು ಡಿ.ಟಿ., ಕರ್ನಾಟಕ ಮೋಟಾರು ಡ್ರೈವಿಂಗ್ ಟ್ರೈನಿಂಗ್ ಸ್ಕೂಲ್ ಮಾಲೀಕರ ಸಂಘದ ರಾಜ್ಯಾಧ್ಯಕ್ಷ ಆನಂದ ಪಾಟೀಲ್ ಹಾಗೂ ಡ್ರೈವಿಂಗ್ ಟ್ರೈನಿಂಗ್ ಸ್ಕೂಲ್ ಅಸೋಸಿಯೇಷನ್ ಜಿಲ್ಲಾ ಅಧ್ಯಕ್ಷ ಶೇಖ್ ಅಹ್ಮದ್ ಕಮಾಲ್ ಉಪಸ್ಥಿತರಿದ್ದರು.