
ಸೈದಾಪುರ:ಅ.31:ದೇಶದ ಏಕತೆ, ಸಮಗ್ರತೆ ಹಾಗೂ ಭದ್ರತೆಯನ್ನು ಬಲಪಡಿಸುವಲ್ಲಿ ಯುವಕರ ಪಾತ್ರ ನಿರ್ಣಾಯಕವಾದುದ್ದು ಎಂದು ಸೈದಾಪುರ ಪೊಲೀಸ್ ಠಾಣೆಯ ಪೊಲೀಸ್ ಇನ್ಸಪೆಕ್ಟರ್ ವಿನಾಯಕ ಅಭಿಪ್ರಾಯಪಟ್ಟರು.
ಪಟ್ಟಣದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಗುರುವಾರ ಸರ್ದಾರ್ ವಲ್ಲಭಬಾಯಿ ಜನ್ಮ ದಿನಾಚರಣೆಯನ್ನು ಗೌರವಿಸಲು ರಾಷ್ಟ್ರೀಯ ಏಕತಾ ದಿನಾಚರಣೆ ಅಂಗವಾಗಿಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಪೊಲೀಸ್ ಇಲಾಖೆ ಹಮ್ಮಿಕೊಂಡಿದ್ದ ಪ್ರಬಂಧ ಮತ್ತು ಭಾಷಣ ಸ್ಪರ್ಧೆಯಲ್ಲಿ ಭಾಗವಹಿಸಿ ಮಾತನಾಡಿದರು. ಹರಿದು ಹಂಚಿ ಹೋಗಿದ್ದ ಭಾರತವನ್ನು ಒಂದುಗೂಡಿಸಿದ ಕೀರ್ತಿ ಭಾರತದ ಉಕ್ಕಿನ ಮನುಷ್ಯ, ದೇಶದ ಮೊದಲ ಗೃಹ ಮಂತ್ರಿ ಸರ್ದಾರ್ ವಲ್ಲಭಬಾಯಿ ಪಟೇಲರಿಗೆ ಸಲ್ಲುತ್ತದೆ. ದೇಶದ ಏಕತೆಗಾಗಿ ಪಟೇಲ್‍ರವರು ನೀಡಿದ ಕೊಡುಗೆ ಅವಿಸ್ಮರಣೀಯ ಅವರ ಆದರ್ಶಗಳನ್ನು ನಾವೆಲ್ಲರು ಪಾಲಿಸಿ ದೇಶಕ್ಕೆ ಉತ್ತಮ ಕೊಡುಗೆಯನ್ನು ನೀಡೋಣ ಎಂದು ಹೇಳಿದರು.
ಇದಕ್ಕೂ ಮೊದಲು ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಕರು ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು. ನಂತರ ಪ್ರಬಂಧ ಮತ್ತು ಭಾಷಣ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತ ಮಕ್ಕಳಿಗೆ ಬಹುಮಾನ ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಪಿಎಸ್‍ಐ ಭೀಮರಾಯ ಕೂಡ್ಲೂರು, ಪೇದೆ ರಾಜಕುಮಾರ, ಮುಖ್ಯಶಿಕ್ಷಕ ಈರಣ್ಣ ಯರಗಟ್ಟಿ, ದಾಮೋದರ, ಗೃಹರಕ್ಷಕ ವಿಜಯ ಕುಮಾರ ಸಹ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಸೇರಿದಂತೆ ಇತರರಿದ್ದರು.

































