ಚಿಟಗುಪ್ಪ: ಅ.3:ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯತನಲ್ಲಿ ಜರುಗಿದ ಕೆಡಿಪಿ ಸಭೆಯಲ್ಲಿ ತಾಲೂಕಿನ ಮುತ್ತಂಗಿ ಗ್ರಾಮ ಪಂಚಾಯತನ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾಗ ಇತ್ತೀಚೆಗೆ ಮರಣ ಹೊಂದಿದ ದೇವಮ್ಮ ಗಂಡ ಮಡಿವಾಳಪ್ಪ ಮುತ್ತಂಗಿ ಇವರ ಮಗನಾದ ಶಿವಪುತ್ರ ಇವರಿಗೆ ಪ್ರಧಾನ ಮಂತ್ರಿ ಜೀವನ ಜ್ಯೋತಿ ಬಿಮಾ ಯೋಜನೆ ಮಾರ್ಗಸೂಚಿಯಂತೆ 2ಲಕ್ಷ ರೂಪಾಯಿ ಪರಿಹಾರದ ಆದೇಶ ಪತ್ರವನ್ನು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ, ಪೌರಾಡಳಿತ ಸಚಿವ ರಹೀಮ್ ಖಾನ, ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ, ಡಾ. ಸಿದ್ದು ಪಾಟೀಲ್, ಡಾ. ಚಂದ್ರಶೇಖರ್ ಪಾಟೀಲ್, ಭೀಮರಾವ ಪಾಟೀಲ ಇವರುಗಳು ಆದೇಶ ಪತ್ರ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ ಬದೋಲೆ, ಚಿಟಗುಪ್ಪ ತಾಲೂಕ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮಿ ಬಿರಾದಾರ್, ಗ್ರಾಮ ಪಂಚಾಯತ್ ಅಧ್ಯಕ್ಷೆ ನಾಗಮ್ಮ ತಾಳಮಡಗಿ, ಉಪಾಧ್ಯಕ್ಷ ಪರಶುರಾಮ, ಅಭಿವೃದ್ಧಿ ಅಧಿಕಾರಿ ಸಂಧ್ಯಾರಾಣಿ ಧೂಮಾಳೆ ಸೇರಿದಂತೆ ಇತರರು ಉಪಸ್ಥಿತರಿದ್ದರು.























