Home ಜಿಲ್ಲೆ ಕಲಬುರಗಿ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು 3.65 ಕೋಟಿ ರೂ.ಅನುದಾನ :ಡಾ.ಅಜಯ್ ಸಿಂಗ್

ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು 3.65 ಕೋಟಿ ರೂ.ಅನುದಾನ :ಡಾ.ಅಜಯ್ ಸಿಂಗ್

ಜೇವರ್ಗಿ,ಏ.29-‘ಬೇಸಿಗೆಯ ಬಿಸಿಲ ತಾಪ ಹೆಚ್ಚುತ್ತಿರುವ ಹಿನ್ನೆಲೆ ಜೇವರ್ಗಿ ಮತ್ತು ಯಡ್ರಾಮಿ ತಾಲ್ಲೂಕುಗಳಲ್ಲಿ ತೀವ್ರಗೊಳ್ಳುತ್ತಿರುವ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ತುರ್ತು ಕಾಮಗಾರಿಗಳಿಗಾಗಿ 3.65 ಕೋಟಿ ಅನುದಾನವನ್ನು ಮೀಸಲಿಡಲಾಗಿದೆ’ ಎಂದು ಕೆಕೆಆರ್‍ಡಿಬಿ ಅಧ್ಯಕ್ಷ ಡಾ.ಅಜಯಸಿಂಗ್ ಹೇಳಿದರು.
ಕಲಬುರಗಿ ನಗರದ ಕೆಕೆಆರ್‍ಡಿಬಿ ಕಚೇರಿಯಲ್ಲಿ ಸೋಮವಾರ ನಡೆದ ಜೇವರ್ಗಿ ಹಾಗೂ ಯಡ್ರಾಮಿ ತಾಲ್ಲೂಕು ಮಟ್ಟದ ಅಧಿಕಾರಿಗಳ ಟಾಸ್ಕ್‍ಫೆÇೀರ್ಸ್ – ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯು ಜೀವರ್ಗಿ ತಾಲ್ಲೂಕಿನಲ್ಲಿ ಹಮ್ಮಿಕೊಂಡಿರುವ 49 ಕಾಮಗಾರಿಗಳಿಗೆ 12.17 ತಾಲ್ಲೂಕಿನಲ್ಲಿ 33 ಕಾಮಗಾರಿಗಳಿಗೆ ಅಂದಾಜು 21.48 ಕೋಟಿ ವೆಚ್ಚ ಮಾಡಲಾಗುತ್ತಿದೆ. 82 ಕಾಮಗಾರಿಗಳಿಗೆ 23.65 ಕೋಟಿ ಖರ್ಚು ಮಾಡಲಾಗುತ್ತಿದೆ’ ಎಂದರು.
ಬೇಸಿಗೆಯಲ್ಲಿ ಯಾವುದೇ ಗ್ರಾಮ, ವಾರ್ಡ್‍ಗಳಲ್ಲಿ ನೀರಿನ ಸಮಸ್ಯೆ ಉಂಟಾಗಬಾರದು. ಅಧಿಕಾರಿಗಳು ಮೊಬೈಲ್‍ಗಳನ್ನು ಸ್ವಿಚ್ ಆಫ್ ಮಾಡದೆ ಕೇಂದ್ರ ಸ್ಥಾನದಲ್ಲಿದ್ದು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕು’ ರಾಜ್ಯ ಸರ್ಕಾರ ಕಲಬುರಗಿ ಜಿಲ್ಲೆಗೆ 12 ಕೋಟಿ ಅನುದಾನ ಬಿಡುಗಡೆ ಮಾಡಿದ್ದು, ಹೆಚ್ಚಿನ ಅನುದಾನಕ್ಕಾಗಿ ಗ್ರಾಮೀಣಾಭಿವೃದ್ಧಿ ಸಚಿವರಿಗೆ ಮನವಿ ಸಲ್ಲಿಸಲಾಗುವುದು’ ಎಂದರು.
ನೀರಿನ ತೀವ್ರ ಅಭಾವವಿರುವ ಪ್ರತಿ ತಾಲ್ಲೂಕಿನ 8 ಗ್ರಾಮಗಳಲ್ಲಿ ಖಾಸಗಿ ಬೋರ್‍ವೆಲ್‍ಗಳನ್ನು ಬಾಡಿಗೆಗೆ ಪಡೆಯಲು ತಲಾ 6 ಲಕ್ಷ ಮೀಸಲಿಡಲಾಗಿದೆ. ಅಂದೋಲಾ, ಆಲೂರು ಮತ್ತು ಅರಳಗುಂಡಗಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಹೊಸ ಬೋರ್‍ವೆಲ್ ಕೊರೆಯಿಸಿ ಮೋಟಾರ್ ಅಳವಡಿಸಲು ಸಭೆಯಲ್ಲಿ ನಿರ್ದೇಶನ ನೀಡಲಾಯಿತು.
ಯಡ್ರಾಮಿ ಹಾಗೂ ಜೇವರ್ಗಿ ತಾಲ್ಲೂಕಿನಲ್ಲಿ ಉದ್ಭವಿಸಿರುವ ನೀರಿನ ಸಮಸ್ಯೆ ನಿವಾರಣೆಗೆ ಕೆಕೆಆರ್‍ಡಿಬಿ ಅಧ್ಯಕ್ಷ ಡಾ.ಅಜಯಸಿಂಗ್ ಅಧಿಕಾರಿಗಳ ಟಾಸ್ಕ್ ಪೆÇೀರ್ಸ್ ಸಭೆ ನಡೆಸಿದರು.
ಮತ್ತು ಗ್ರಾಮಗಳಲ್ಲಿ ವಿದ್ಯುತ್ ಈ ಕಲ್ಪಿಸುವ ಕಾಮಗಾರಿ ಕೈಗೊಳ್ಳಬೇಕು. ಸೊನ್ನ ಗ್ರಾಮದಲ್ಲಿ ಬಾವಿ ಹೂಳೆತ್ತಲು 10 ಲಕ್ಷ, ಟ್ಯಾಂಕರ್ ಮೂಲಕ ನೀರು ಸರಬರಾಜು, ಪೈಪ್‍ಲೈನ್ ದುರಸ್ತಿ ಹಾಗೂ ಜಾನುವಾರುಗಳಿಗೆ ಗೋಕಟ್ಟೆ ನಿರ್ಮಾಣಕ್ಕೆ ಆದ್ಯತೆ ನೀಡಲಾಗುವುದು’ ಎಂದರು.
ದಶಕಗಳಿಂದ ಕಾಡುತ್ತಿರುವ ನೀರಿನ ಸಮಸ್ಯೆ ಶಾಶ್ವತ ಪರಿಹರಿಸಲು ಆಲೂರ, ಕೂಡಿ ಮತ್ತು ಯಾಳವಾರ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳನ್ನು 2027ರ ಫೆಬ್ರವರಿ ಅಂತ್ಯದೊಳಗೆ ಪೂರ್ಣಗೊಳಿಸಬೇಕು ಎಂದರು.
ಮಲ್ಲಣ್ಣ ಯಲಗೋಡ, ಯಡ್ರಾಮಿ ತಹಶೀಲ್ದಾರ್ ಯಲ್ಲಪ್ಪ ಸುಬೇದಾರ, ಜೇವರ್ಗಿ ತಾಪಂ ಇಒ ರವಿಚಂದ್ರ ರೆಡ್ಡಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಗುರುಶಾಂತಯ್ಯ ಗದ್ದಗಿಮಠ, ಪುರಸಭೆ ಮುಖ್ಯಾಧಿಕಾರಿ ಶಂಭುಲಿಂಗ ದೇಸಾಯಿ, ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿ ಉಪಸ್ಥಿತರಿದ್ದರು.