
ಕಲಬುರಗಿ,ಅ.18-ಆರ್‍ಎಸ್‍ಎಸ್ ನಿಷೇಧಕ್ಕಾಗಿ ಮಾಜಿ ಪ್ರಧಾನಿ ದೇವೇಗೌಡ ಅವರ ಹೇಳಿಕೆಯನ್ನು ಉಲ್ಲೇಖಿಸಿ ಸಚಿವ ಪ್ರಿಯಾಂಕ್ ಖರ್ಗೆ ಟಾಂಗ್ ನೀಡಿದ್ದಾರೆ.
25 ವರ್ಷಗಳ ಹಿಂದೆ ಮಾಜಿ ಪ್ರಧಾನಿ ದೇವೇಗೌಡರ ಹೇಳಿಕೆ ಪ್ರಕಟವಾಗಿದ್ದ ಪತ್ರಿಕೆಯ ತುಣುಕೊಂದನ್ನು ತಮ್ಮ ಎಕ್ಸ್ ಖಾತೆಯಲ್ಲಿ ಹಾಕಿ, ಆರ್ ಎಸ್ ಎಸ್ ನಿಷೇಧವಾಗಬೇಕು ಎನ್ನುವುದು ಜೆಡಿಎಸ್ ನ ಮನ್ ಕೀ ಬಾತ್. ಈ ಮನದಾಳದ ಮಾತುಗಳನ್ನು ಇಂದು ಮರೆತಿದ್ದಾರೆಯೇ? ಅಥವಾ ಮರೆಯಲು ಪ್ರಯತ್ನಿಸುತ್ತಿದ್ದಾರೆಯೇ? ಎಂದು ಪ್ರಿಯಾಂಕ್ ಖರ್ಗೆ ಕಿಚಾಯಿಸಿದ್ದಾರೆ.
ಆರ್ ಎಸ್ ಎಸ್ ಸಂಘಟನೆಯ ಚಟುವಟಿಕೆಗಳನ್ನು ಸರ್ಕಾರದ ಜಾಗದಲ್ಲಿ ನಿಷೇಧಿಸಬೇಕು ಎಂದು ಸಚಿವರು ಸರ್ಕಾರಕ್ಕೆ ಪತ್ರ ಬರೆದ ಹಿನ್ನೆಲೆಯಲ್ಲಿ ಆರ್ ಎಸ್ ಎಸ್ ಸಂಘಟನೆಯ ಬೆಂಬಲಿಗರು ಸಚಿವರ ವಿರುದ್ದ ಅವಹೇಳನಕಾರಿ ಮಾತುಗಳಿಂದ ನಿಂದಿಸಿದ್ದರು.
ಈಗ ಮಾಜಿ ಪ್ರಧಾನಿಯ ಮಾತುಗಳನ್ನೇ ಉಲ್ಲೇಖಿಸಿ ಈಗ ಸಚಿವರು ಬಿಜೆಪಿ ಹಾಗೂ ಜೆಡಿಎಸ್ ಪಕ್ಷಕ್ಕೆ ತಿರುಗೇಟು ನೀಡಿದ್ದಾರೆ.