
ನರವಣೆ ಅಪ್ರಕಟಿತ ಆತ್ಮಚರಿತ್ರೆ
ನವದೆಹಲಿ,ಫೆ,೩-ಭಾರತೀಯ ಸೇನೆಯ ಮಾಜಿ ಮುಖ್ಯಸ್ಥ ಎಂ.ಎಂ. ನರವಣೆ ಅವರ ಅಪ್ರಕಟಿತ ಆತ್ಮಚರಿತ್ರೆಯಲ್ಲಿ ವಿಷಯಗಳನ್ನು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಉಲ್ಲೇಖಿಸಿ ನೀಡಿದ ಹೇಳಿಕೆ ಲೋಕಸಭೆಯಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರ ನಡುವೆ ಮಾತಿನ ಚಕಮಕಿ ಗದ್ದಲ ಕೋಲಾಹಲಕ್ಕೆ ಕಾರಣವಾದ ಘಟನೆ ನಡೆದಿದೆ
ಆಡಳಿತ ಮತ್ತು ಪ್ರತಿಪಕ್ಷದ ಸದಸ್ಯರ ನಡುವೆ ಮಾತಿನ ಚಕಮಕಿ ನಡೆದ ಹಿನ್ನೆಲೆಯಲ್ಲಿ ಕಲಾಪ ೧೨ ಗಂಟೆಗೆ ಮುಂದೂಡಲಾಯಿತು, ಮತ್ತೆ ಸದನ ಸಮಾವೇಶಗೊಂಡಾಗ ಗದ್ದಲ ಕೋಲಾಹಲ ಸೃಷ್ಟಿಯಾಗಿ ಮತ್ತೆ ಮಧ್ಯಾಹ್ನ ೨ ಗಂಟೆಗೆ ಮುಂದೂದುವಂತಾಯಿತು .
ರಾಹುಲ್ ಗಾಂಧಿ ಅವರ ಹೇಳಿಕೆಗೆ ಗೃಹ ಸಚಿವ ಅಮಿತ್ ಶಾ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಬಿಜೆಪಿ ಸದಸ್ಯರು ತೀವ್ರವಾಗಿ ಆಕ್ಷೇಪಿಸಿ ಸದನದೊಳಗೆ ಅಧಿಕೃತವಾಗಿ ಪ್ರಕಟವಾದ ವಿಷಯಗಳನ್ನು ಮಾತ್ರ ಉಲ್ಲೇಖಿಸಬಹುದು ಎನ್ನುತ್ತಿದ್ದಂತೆ ಕಾಂಗ್ರೆಸ್ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು ಇದರಿಂದ ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರ ನಡುವೆ ಮಾತಿನ ಚಕಮಕಿ ನಡೆದಿದ್ದರಿಂದ ಕಲಾಪವನ್ನು ಮಧ್ಯಾಹ್ನಕ್ಕೆ ಮುಂದೂಡುವಂತಾಯಿತು.
ರಾಹುಲ್ ಗಾಂಧಿ, ಅಪ್ರಕಟಿತ ಲೇಖನ ಪ್ರಸ್ತಾಪಿಸುವುದು ಸರಿಯಲ್ಲ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜಯ ಹೇಳಿದರು. ಇದಕ್ಕೆ ಕಾಂಗ್ರೆಸ್ ಸದಸ್ಯರಾದ ಕೆಸಿ ವೇಣುಗೋಪಾಲ್ ಸೇರಿದಂತೆ ಹಲವು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಮಾತಿನ ಚಕಮಕಿಯಿಂದಾಗಿ ಕಲಾಪ ಎರಡು ಬಾರಿ ಮುಂದೂಡುವಂತಾಯಿತು
ಆಡಳಿತಾರೂಢ ಎನ್ಡಿಎ ಮತ್ತು ಪ್ರತಿ ಪಕ್ಷದ ಮೈತ್ರಿಕೂಟ ಇಂಡಿಯಾ ಸದಸ್ಯರ ನಡುವೆ ಗದ್ದಲ ಕೋಲಾಹಲ ಮಾತಿನ ಚಕಮಕಿ ನಡೆದ ಹಿನ್ನೆಲೆಯಲ್ಲಿ ಪರಿಸ್ಥಿತಿಯನ್ನು ಸರಿದಾರಿಗೆ ತರಲು ಸಭಾಧ್ಯಕ್ಷ ಓಂ ಬಿರ್ಲಾ ಹಲವು ಬಾರಿ ಪ್ರಯತ್ನಿಸಿದರೂ ಸಾಧ್ಯವಾಗದ ಹಿನ್ನೆಲೆಯಲ್ಲಿ ಕಲಾಪವನ್ನು ಮಧ್ಯಾಹ್ನಕ್ಕೆ ಮುಂದೂಡಿದರು.
ರಾಹುಲ್ ಗಾಂಧಿ ಅವರು ಪ್ರಸ್ತಾಪಿಸಿದ ವಿಷಯ ಸರಿಯಲ್ಲ ಎಂದು ಮುಗಿಬಿದ್ದ ಆಡಳಿತ ಪಕ್ಷದ ಸದಸ್ಯರಿಗೆ ಕಾಂಗ್ರೆಸ್ ಮತ್ತು ಇಂಡಿಯಾ ಮೈತ್ರಿಕೂಟದ ಸದಸ್ಯರು ತೀವ್ರ ಪ್ರತಿರೋಧ ನೀಡಿದರು, ಇದರಿಂದ ಆಡಳಿತ ಮತ್ತು ಪ್ರತಿಪಕ್ಷದ ಸದಸ್ಯರ ನಡುವೆ ಚಕಮಕಿ ನಡೆಯಿತು.
ಇದೇ ವೇಳೆ ರಾಹುಲ್ ಗಾಂಧಿ ಅವರು ೨೦೨೦ ರ ಭಾರತ-ಚೀನಾ ಗಡಿ ಬಿಕ್ಕಟ್ಟಿನ ಕುರಿತು ಮಾತನಾಡಲು ಪ್ರಯತ್ನಿಸಿದರು, ಇದರಿಂದ ಸದನದಲ್ಲಿ ಮತ್ತಷ್ಟು ಗದ್ದಲ ಕೋಲಾಹಲಕ್ಕೆ ಕಾರಣವಾಯಿತು.
ಅಮೆರಿಕ, ಯುರೋಪಿಯನ್ ಒಕ್ಕೂಟ ವ್ಯಾಪಾರ ಒಪ್ಪಂದಗಳ ಕುರಿತು ಸಂಸತ್ತನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಂತೆ ಸರ್ಕಾರವನ್ನು ಕಾಂಗ್ರೆಸ್ ಆಗ್ರಹಿಸಿದೆ.
ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಸಂಸತ್ತನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಮತ್ತು ಯುರೋಪಿಯನ್ ಒಕ್ಕೂಟ ಮತ್ತು ಯುಎಸ್ ವ್ಯಾಪಾರ ಒಪ್ಪಂದಗಳ ಪಠ್ಯವನ್ನು ಎರಡೂ ಸದನಗಳ ಮೇಜಿನ ಮೇಲೆ ಇರಿಸಿ ಚರ್ಚಿಸಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ.































