
ಧಾರವಾಡ,ಅ.೭: ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರು ಅವರು ಸೋಮವಾರ ಧಾರವಾಡದಲ್ಲಿ ತಮ್ಮ ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಕೆಗೂ ಮುನ್ನ ನಗರದ ಶ್ರೀ ಉಳವಿ ಚನ್ನಬಸವೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅವರು, ಬಳಿಕ ಜಿಲ್ಲಾಧಿಕಾರಿ ಕಚೇರಿವರೆಗೆ ನಡೆದ ಬೃಹತ್ ಮೆರವಣಿಗೆಯಲ್ಲಿ ಪಾಲ್ಗೊಂಡರು.
ಈ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್ ಶೆಟ್ಟರ್ ಹಾಗೂ ಬಸವರಾಜ ಬೊಮ್ಮಾಯಿ, ವಿಧಾನ ಪರಿಷತ್ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ, ಮಾಜಿ ಸಚಿವ ಸಿ.ಸಿ. ಪಾಟೀಲ್, ಶಾಸಕರಾದ ಅರವಿಂದ ಬೆಲ್ಲದ, ಅಮೃತ ದೇಸಾಯಿ, ಮಾಜಿ ಮಹಾಪೌರರಾದ ಈರೇಶ ಅಂಚಟಗೇರಿ, ಬಿ.ಸಿ. ಪಾಟೀಲ,ಜಿಲ್ಲಾ ಬಿಜೆಪಿ ಅಧ್ಯಕ್ಷ ತಿಪ್ಪಣ್ಣ ಮಜ್ಜಗಿ,ನಿಂಗಪ್ಪ ಸುತಗಟ್ಟಿ, ಸೇರಿದಂತೆ ಹಲವು ಶಾಸಕರು, ಮಾಜಿ ಶಾಸಕರು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.



















